ಬೆಂಗಳೂರು: ಅಕ್ಟೋಬರ್ 25ರಂದು ಮುಖ್ಯಮಂತ್ರಿ ಸಿದ್ಧರಾಮಯ್ಯ ಅವರ ನೇತೃತ್ವದಲ್ಲಿ ಮಹತ್ವದ ರಾಜ್ಯ ಸಚಿವ ಸಂಪುಟ ಸಭೆ ನಿಗದಿಯಾಗಿದೆ. ಈ ಸಭೆಯಲ್ಲಿ ರಾಜ್ಯದ ಅಭಿವೃದ್ಧಿ ಕಾರ್ಯಗಳಿಗೆ ಅನುಮೋದನೆ, ಹಣಕಾಸು ಒದಗಿಸುವ ಕೆಲಸ ಮಾಡಲಾಗುತ್ತಿದೆ.
ಈ ಬಗ್ಗೆ ಸಚಿವ ಸಂಪುಟದ ಸರ್ಕಾರದ ಜಂಟಿ ಕಾರ್ಯದರ್ಶಿ ಆರ್.ಚಂದ್ರಶೇಖರ್ ಅವರು ಮಾಹಿತಿ ನೀಡಿದ್ದು ಅ. 25 ರಂದು ಶುಕ್ರವಾರ ಬೆಳಿಗ್ಗೆ 11 ಗಂಟೆಗೆ ಸಚಿವ ಸಂಪುಟದ 2024ನೇ ಸಾಲಿನ 22ನೇ ಸಭೆಯನ್ನು ವಿಧಾನಸೌಧದದ ಸಚಿವ ಸಂಪುಟ ಸಭಾಮಂದಿರದಲ್ಲಿ ಕರೆಯಲಾಗಿದೆ ಎಂದಿದ್ದಾರೆ.
ಸಿಎಂ ಸಿದ್ಧರಾಮಯ್ಯ ಅವರು ಜಾತಿ ಗಣತಿ ವರದಿಯನ್ನು ಪ್ರಣಾಣಿಕೆಯಲ್ಲಿ ಘೋಷಿಸಿದಂತೆ ಜಾರಿಗೊಳಿಸುವುದಾಗಿ ಈ ಹಿಂದೆ ತಿಳಿಸಿದ್ದರು. ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಿ ನಿರ್ಧಾರ ಪ್ರಕಟಿಸುವುದಾಗಿ ಹೇಳಿದ್ದರು. ಅ.25ರಂದು ನಡೆಯಲಿರುವಂತ ರಾಜ್ಯ ಸಚಿವ ಸಂಪುಟ ಸಭೆಯಲ್ಲಿ ಚರ್ಚಿಸಲಿದ್ದಾರೆ ಎನ್ನಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

