ವಿಜಯಪುರ: ವಕ್ಫ್ ಕಾಯ್ದೆ ರದ್ದತಿಗೆ ಆಗ್ರಹಿಸಿ ಶಾಸಕ ಬಸನಗೌಡ ಪಾಟೀಲ ಯತ್ನಾಳ ನೇತೃತ್ವದಲ್ಲಿ ನಗರದಲ್ಲಿ ಬೃಹತ್ ಪ್ರತಿಭಟನೆ ನಡೆಯುತ್ತಿದೆ.
ನಗರದ ಶ್ರೀಸಿದ್ದೇಶ್ವರ ದೇವಸ್ಥಾನ ಹತ್ತಿರ ವಕ್ಫ್ ಕಾಯ್ದೆ ವಿರೋಧಿಸಿ ಹೋರಾಟ ಹಮ್ಮಿಕೊಳ್ಳಲಾಗಿದೆ. ಸಂಸದ ರಮೇಶ ಜಿಗಜಿಣಗಿ, ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ಹಾಗೂ ನಮೋ ಬ್ರಿಗೇಡ್ ನ ಚಕ್ರವರ್ತಿ ಸೂಲಿಬೆಲೆ ಪಾಲ್ಗೊಂಡಿದ್ದಾರೆ.
ಸಾರ್ವಜನಿಕರ, ರೈತರ, ಸಂಘ-ಸಂಸ್ಥೆಗಳ, ದೇವಸ್ಥಾನಗಳ, ಸರ್ಕಾರಿ ಆಸ್ತಿ, ಜಮೀನುಗಳನ್ನು ವಕ್ಪ್ ಆಸ್ತಿ ಎಂದು ಉತಾರೆಯಲ್ಲಿ ನಮೂದಿಸುವುದನ್ನು ಕೈಬಿಡುವಂತೆಯೂ ಒತ್ತಾಯಿಸಿ ಪ್ರತಿಭಟನೆ ಆಯೋಜಿಸಲಾಗಿದೆ.
ಕಪ್ಪು ಪಟ್ಟಿ ಕಟ್ಟಿಕೊಂಡು ಪ್ರತಿಭಟನೆಯಲ್ಲಿ ವಿವಿಧ ನಾಯಕರು, ಮುಖಂಡರು ಭಾಗಿಯಾಗಿದ್ದು, ಸಮಾವೇಶದ ಬಳಿಕ ಜಿಲ್ಲಾಧಿಕಾರಿ ಕಚೇರಿಯವರೆಗೆ ತೆರಳಿ ರಾಷ್ಟ್ರಪತಿ, ಪ್ರಧಾನಿ ಮತ್ತು ರಾಜ್ಯಪಾಲರಿಗೆ ಮನವಿ ಸಲ್ಲಿಸಲಾಗುತ್ತದೆ ಎಂದು ತಿಳಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

