Breaking News

1 ಕೋಟಿ ರೂ. ವೆಚ್ಚದ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಚಾಲನೆ

ಹಾನಗಲ್: ತಾಲ್ಲೂಕಿನ ಚಿಕ್ಕೇರಿ ಹೊಸಳ್ಳಿ ಗ್ರಾಮದಲ್ಲಿ ಸಣ್ಣ ನೀರಾವರಿ ಇಲಾಖೆಯಿಂದ ರಾಜ್ಯ ವಿಪತ್ತು ಉಪಶಮನ ನಿಧಿಯಡಿ ₹ 1ಕೋಟಿ ವೆಚ್ಚದ ಚಿಕ್ಕೇರಿ ಕೆರೆ ಅಭಿವೃದ್ಧಿ ಕಾಮಗಾರಿಗೆ ಶಾಸಕ ಶ್ರೀನಿವಾಸ ಮಾನೆ ಭೂಮಿಪೂಜೆ ನೆರವೇರಿಸಿದರು.
ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಕೆರೆಯ ಮೂರು ತೂಬುಗಳನ್ನು ಹೊಸದಾಗಿ ನಿರ್ಮಿಸಿ, ಕೆರೆ ಕೋಡಿ ದುರಸ್ತಿ ಕಾಮಗಾರಿ ಕೈಗೊಳ್ಳಲಾಗುವುದು. 200 ಮೀ. ಪಿಚ್ಚಿಂಗ್ ಹಾಗೂ ಡೊಂಬು ಬಿದ್ದಿರುವ ಜಾಗವನ್ನು ಪುನರ್ ನಿರ್ಮಿಸಿ ಕೆರೆಯನ್ನು ಸಮಗ್ರವಾಗಿ ಪುನಶ್ಚೇತನಗೊಳಿಸಲಾಗುವುದು ಕೃಷಿ ಚಟುವಟಿಕೆಗೆ ಅನುಕೂಲವಾಗುತ್ತದೆ ಹಾಗೂ ರೈತರ ಬಹು ವರ್ಷಗಳ ಬೇಡಿಕೆಗೆ ತೃಪ್ತಿ ಸಿಕ್ಕಿದೆ ಎಂದರು
ತಾಲ್ಲೂಕಿನಲ್ಲಿ ಒಟ್ಟು ಒಂದು ಸಾವಿರಕ್ಕೂ ಹೆಚ್ಚು ಕೆರೆಗಳಿವೆ ಈ ಪೈಕಿ ಬಹುತೇಕ ಕೆರೆಗಳನ್ನು ನೀರಾವರಿ ಯೋಜನೆಗಳ ಅಡಿ ತುಂಬಿಸಿ ನೀರಿನ ಹಾಹಾಕಾರ ತಪ್ಪಿಸಲಾಗಿದ್ದು, ಭತ್ತದ ನಾಟಿ ಸೇರಿದಂತೆ ಕೃಷಿ ಚಟುವಟಿಕೆಗಳಿಗೆ ಅನುಕೂಲವಾಗಿದೆ ಅಂತರ್ಜಲ ಮಟ್ಟವೂ ಸುಧಾರಣೆ ಕಂಡಿದೆ ಉಳಿದ ಕೆರೆಗಳನ್ನೂ ತುಂಬಿಸುವ ನಿಟ್ಟಿನಲ್ಲಿ ಕೆಲ ಯೋಜನೆಗಳನ್ನು ರೂಪಿಸಲಾಗಿದೆ. ತಾಲ್ಲೂಕನ್ನು ಸಂಪೂರ್ಣವಾಗಿ ನೀರಾವರಿ ವ್ಯಾಪ್ತಿಗೆ ಒಳಪಡುವ ದೃಷ್ಟಿಯಿಂದ ಕೆಲಸ ಮಾಡಲಾಗುತ್ತಿದೆ ಎಂದು ತಿಳಿಸಿದರು.
ಶಾಸಕ ಶ್ರೀನಿವಾಸ ಮಾನೆ ಮಾತನಾಡಿ ಗ್ರಾಮಸ್ಥರ ಅಹವಾಲು ಆಲಿಸಿದರು. ಕೆಲವು ಸಮಸ್ಯೆಗಳಿಗೆ ಸ್ಥಳದಲ್ಲಿಯೇ ಪರಿಹಾರ ದೊರಕಿಸುವಲ್ಲಿಯೂ ಯಶಸ್ವಿಯಾದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *