ಧಾರವಾಡ : ಕಲ್ಯಾಣ ಕರ್ನಾಟಕದ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ, ಶೀಘ್ರವೇ ನೇಮಕಾತಿ ನಡೆಯಲಿದೆ ಎಂದು ಶಿಕ್ಷಣ ಸಚಿವ ಮಧು ಬಂಗಾರಪ್ಪ ಹೇಳಿದ್ದಾರೆ.
ಧಾರವಾಡದಲ್ಲಿ ಮಾತನಾಡಿದ ಸಚಿವರು ಕಲ್ಯಾಣ ಕರ್ನಾಟಕದ ಭಾಗದಲ್ಲಿ 5800 ಶಿಕ್ಷಕರ ನೇಮಕಾತಿಗೆ ಒಪ್ಪಿಗೆ ಸಿಕ್ಕಿದೆ, ದೈಹಿಕ ಶಿಕ್ಷಕರ ನೇಮಕಾತಿ ಬಗ್ಗೆ ಸಿಎಂ ಜೊತೆ ಮಾತನಾಡುತ್ತೇನೆ, ನಾನು ಸಚಿವನಾದ ಮೇಲೆ 13,000 ಕ್ಕೂ ಹೆಚ್ಚು ಶಿಕ್ಷಕರ ನೇಮಕಾತಿ ಆಗಿದೆ ಎಂದರು.
ಮಕ್ಕಳು ಮೊಟ್ಟೆ ತಿಂದರೆ ಸಾಲದು, ವ್ಯಾಯಾಮ ಮಾಡಬೇಕು. ಹಾಗಾಗಿ ದೈಹಿಕ ಶಿಕ್ಷಕರನ್ನು ನೇಮಕ ಮಾಡುತ್ತೇವೆ ಸರ್ಕಾರಿ ಶಾಲೆಗಳಲ್ಲಿ ಒಳ್ಳೆಯ ಶಿಕ್ಷಕರಿದ್ದಾರೆ, ಅವರನ್ನು ನಾವು ಬಳಸಿಕೊಳ್ಳಬೇಕು ಎಂದರು.
bigtvnews | Hubli Dharwad News | Kannada News | Karnataka News Hubli News | News In Hubli | Local news





