Breaking News

ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಸಿಎಂ ಸೂಚನೆ

ಬೆಂಗಳೂರು: ಪರಿಶಿಷ್ಟ ಪಂಗಡಗಳ ಜಾತಿ ಪ್ರಮಾಣಪತ್ರದಲ್ಲಿರುವ ಗೊಂದಲ ನಿವಾರಣೆಗೆ ಆದೇಶ ಹೊರಡಿಸುವಂತೆ ಸಿಎಂ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ವಿಧಾನಸೌಧದ ಸಮಿತಿ ಕೊಠಡಿಯಲ್ಲಿ ಪರಿಶಿಷ್ಟ ಪಂಗಡ ಸಮುದಾಯಗಳ ಸಮಸ್ಯೆ ಕುರಿತು ಸಿಎಂ ಸಭೆ ನಡೆಸಿದರು.
ಸಭೆ ಬಳಿಕ ಪ್ರತಿಕ್ರಿಯೆ ನೀಡಿದ ಸಿಎಂ, ಎಸ್‌ಟಿ ಸಮುದಾಯದ ಎಮ್‌ಎಲ್‌ಎಗಳು, ಸ್ವಾಮೀಜಿಗಳು ಸಮಸ್ಯೆ ಬಗ್ಗೆ ಮನವಿ ಮಾಡಿದ್ದರು. ವಾಲ್ಮೀಕಿ ನಿಗಮದ ಅನುದಾನವನ್ನು ಕಡಿತ ಮಾಡಬಾರದು ಎಂದು ಮನವಿ ಮಾಡಿದ್ದರು. ಎಸ್‌ಟಿ ಸಮುದಾಯದಲ್ಲಿ ಜಾತಿ ಪ್ರಮಾಣಪತ್ರವನ್ನು ಕೆಲವರು ಸುಳ್ಳು ಹೇಳಿ ಪಡೆಯುತ್ತಿದ್ದಾರೆ. ಈ ಬಗ್ಗೆ ಕ್ರಮಕ್ಕೆ ಮನವಿ ಮಾಡಿದ್ದರು ಹಾಗಾಗಿ, ಕ್ರಮಕ್ಕೆ ಸೂಚನೆ ನೀಡಿದ್ದೇನೆ ಎಂದರು.

Share News

About BigTv News

Check Also

68 ಎಕರೆ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿದ ಆರೋಪ, ಕೆಎಎಸ್ ಅಧಿಕಾರಿ ವಿರುದ್ಧ ಎಫ್‌ಐಆರ್!

ಬೆಂಗಳೂರು ಗ್ರಾಮಾಂತರ: ದೇವನಹಳ್ಳಿ ತಾಲೂಕಿನಲ್ಲಿ ಕೋಟ್ಯಂತರ ರೂಪಾಯಿ ಮೌಲ್ಯದ ಜಮೀನಿಗೆ ನಕಲಿ ದಾಖಲೆ ಸೃಷ್ಟಿಸಿ, ಅಕ್ರಮವಾಗಿ ಆರ್‌ಟಿಸಿ ಖಾತೆ ಬದಲಾವಣೆ …

Leave a Reply

Your email address will not be published. Required fields are marked *