Breaking News

ಲಿಂಗಾಯತ ಪಂಚಮಸಾಲಿ ಸಮುದಾಯಕ್ಕೆ 2ಎ ಮೀಸಲಾತಿ ಸಿಗುವ ಭರವಸೆ ಇದೆ: ಬಸವಜಯ ಮೃತ್ಯುಂಜಯ ಸ್ವಾಮೀಜಿ

ಹುಬ್ಬಳ್ಳಿ: ಲಿಂಗಾಯತ ಪಂಚಮಸಾಲಿ ಸಮಾಜಕ್ಕೆ 2ಎ ಮೀಸಲಾತಿ ನೀಡುವ ಬೇಡಿಕೆ, ಹೋರಾಟ ಹಲವು ವರ್ಷಗಳಿಂದ ಮುಂದುವರಿದಿದ್ದು ಮೀಸಲಾತಿ ಸಿಗುವ ಸಾಧ್ಯತೆ ಇದೆ ಎಂದು ಕೂಡಲಸಂಗಮ ಪಂಚಮಸಾಲಿ ಪೀಠಾಧ್ಯಕ್ಷ ಶ್ರೀ ಬಸವಜಯ ಮೃತ್ಯುಂಜಯ ಸ್ವಾಮೀಜಿ ಹೇಳಿದರು.
ಹುಬ್ಬಳ್ಳಿಯಲ್ಲಿಂದು ಮಾತನಾಡಿದ ಅವರು ಈ ವಿಚಾರವಾಗಿ ಚರ್ಚಿಸಲು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ತಮ್ಮ ಗೃಹಕಚೇರಿಯಲ್ಲಿ ಅ. 18ರಂದು ಸಭೆ ಕರೆದಿದ್ದಾರೆ, ಇದುವರೆಗೂ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ನಮ್ಮ ಬೇಡಿಕೆಗೆ ಸಮರ್ಪಕವಾಗಿ ಸ್ಪಂದಿಸಿಲ್ಲ. ಅವರು 2 ಬಾರಿ ಕೊಟ್ಟ ಮಾತಿಗೆ ತಪ್ಪಿದ್ದಾರೆ. ಬೇಡಿಕೆ ಈಡೇರಿಕೆಗಾಗಿ ಸಮಾಜದ ವಕೀಲರೂ ಪ್ರತಿಭಟನೆ ಮಾಡಿದರು.
ಇದೀಗ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅಕ್ಟೋಬರ್ 18ರಂದು ಸಭೆ ಕರೆದಿದ್ದಾರೆ. ನಾನು ಮತ್ತು ಸಮಾಜದ 11 ವಕೀಲರ ನಿಯೋಗ ಸಿಎಂ ಭೇಟಿಗೆ ತೆರಳಲಿದ್ದೇವೆ. ಸಭೆಯಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ನವರು ಸಕಾರಾತ್ಮಕವಾಗಿ ಸ್ಪಂದಿಸಲಿದ್ದಾರೆ ಎಂಬ ಭರವಸೆ ಇದೆ. ಲಿಂಗಾಯತ ಸಮಾಜದ ಎಲ್ಲ ಶಾಸಕರು ಸಭೆಗೆ ಅಗಮಿಸುವಂತೆ ಸ್ವಾಮೀಜಿ ಕರೆ ನೀಡಿದ್ದಾರೆ. ಒಂದು ವೇಳೆ ಮುಖ್ಯಮಂತ್ರಿ ಸಿದ್ಧರಾಮಯ್ಯ ತಮ್ಮ ಬೇಡಿಕೆ ಈಡೇರಿಸಲು ಸರಿಯಾಗಿ ಹಾಗೂ ಸಕಾರಾತ್ಮಕವಾಗಿ ಸ್ಪಂದಿಸದೇ ಇದ್ದರೇ ಅನಿವಾರ್ಯವಾಗಿ ಮುಂದಿನ ಹೋರಾಟದ ರೋಪು ರೇಷೇಗಳನ್ನು ನಿರ್ಧರಿಸಲಾಗುವುದು ಎಂದರು.
ನಮ್ಮ ಹೋರಾಟದ ಮೂಲಕ ಅನೇಕ ಕಡೆಗಳಲ್ಲಿ ಶಕ್ತಿ ಪ್ರದರ್ಶನ ಮಾಡಲಾಗಿದೆ. ‌ಈಗಾಗಲೇ ಪಂಚಮಸಾಲಿ ಸಮಾಜದ ಮೀಸಲಾತಿ ಹೋರಾಟ ಮೊದಲ ಹಂತ ಯಶಸ್ವಿಯಾಗಿದೆ.‌ ಈ ಬಾರಿ ಮುಖ್ಯಮಂತ್ರಿಗಳು ಸಕಾರಾತ್ಮಕವಾಗಿ ಸ್ಪಂದಿಸದೇ ಹೋದರೆ ಉಗ್ರ ಸ್ವರೂಪದ ಹೋರಾಟ ಅನಿವಾರ್ಯ ಎಂದರು.

Share News

About BigTv News

Check Also

ಆನ್‌ಲೈನ್ ಆಯಪ್‌ನಲ್ಲಿ ಸಾಲ ಪಡೆದ ಮಹಿಳೆಗೆ ಫೋಟೋ ಮಾರ್ಫಿಂಗ್ ಬೆದರಿಕೆ – ₹2.90 ಲಕ್ಷ ವಂಚನೆ!

ಮಂಗಳೂರು: ಆನ್‌ಲೈನ್ ಆಯಪ್ ಮೂಲಕ ಸಾಲ ಪಡೆದ ಮಹಿಳೆಯೊಬ್ಬರಿಗೆ ಫೋಟೋ ಮಾರ್ಫ್ ಮಾಡಿ ಸಾಮಾಜಿಕ ಜಾಲತಾಣಗಳಲ್ಲಿ ಹರಿಬಿಡುವುದಾಗಿ ಬೆದರಿಸಿ ₹2.90 …

Leave a Reply

Your email address will not be published. Required fields are marked *