Breaking News

ಹಿಂಗಾರು ಮಳೆಗೆ ನಲುಗಿದ ರಾಜ್ಯ ರಾಜಧಾನಿ ಬೆಂಗಳೂರು

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಹಿಂಗಾರು ಮಳೆಗೆ ಅಕ್ಷರಶಃ ನಲುಗಿದ್ದು, ನಿನ್ನೆ ಸೋಮವಾರದಿಂದ ಮಂಗಳವಾರ ಬೆಳಗ್ಗೆವರೆಗೆ ಸುರಿದ ಧಾರಾಕಾರ ಮಳೆಗೆ ವಾಹನ ಸಂಚಾರ, ಜನಜೀವನ ಅಸ್ತವ್ಯಸ್ತಗೊಂಡಿದೆ. ಐಎಂಡಿ ಹೇಳುವ ಪ್ರಕಾರ, ರಾತ್ರಿಯಿಂದ ಈವರೆಗೆ ಬರೋಬ್ಬರಿ 16.2 ಮಿಮೀ ಮಳೆ ದಾಖಲಾಗಿದೆ.
ಬೆಂಗಳೂರು ನಗರದ ವಿವಿಧಡೆ ಮಳೆಯಿಂದಾಗಿ ಅನೇಕ ಸಮಸ್ಯೆಗಳು ಸೃಷ್ಟಿಯಾಗಿದ್ದು, ಬಿಬಿಎಂಪಿ ಅಲರ್ಟ್ ಆಗಿದೆ.
ಭಾರತೀಯ ಹವಾಮಾನ ಇಲಾಖೆಯ ವರದಿ ಪ್ರಕಾರ, ಬೆಂಗಳೂರಿನ ಏರ್‌ಪೋರ್ಟ್ ಪ್ರದೇಶದಲ್ಲಿ 10.5 ಮಿ.ಮೀ. ಹಾಗೂ ಎಚ್‌ಎಎಲ್ ವಿಮಾನ ನಿಲ್ದಾಣದಲ್ಲಿ 8.6 ಮಿ.ಮೀ. ಮಳೆ ದಾಖಲಾಗಿದೆ. ನಗರದ ತಗ್ಗು ಪ್ರದೇಶಗಳಲ್ಲಿ ನೀರು ನಿಂತರೆ, ಪ್ರಮುಖ ರಸ್ತೆಗಳೇ ಜಲಾವೃತಗೊಂಡು ಸಮಸ್ಯೆ ಸೃಷ್ಟಿಯಾಗಿದೆ.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *