Breaking News

ಮುಂಬೈನಲ್ಲಿ ಅಗ್ನಿ ಅವಘಡ: ಮೂವರ ಸಾವು

ಮುಂಬೈ: ಲೋಖಂಡವಾಲಾ ಕಾಂಪ್ಲೆಕ್ಸ್‌ನಲ್ಲಿರುವ 14 ಅಂತಸ್ತಿನ ವಸತಿ ಕಟ್ಟಡವೊಂದರಲ್ಲಿ ಬುಧವಾರ ಬೆಳಿಗ್ಗೆ ಸಂಭವಿಸಿದ ಅಗ್ನಿ ಅವಘಡದಲ್ಲಿ ಮೂವರು ಸಾವನ್ನಪ್ಪಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಅಂಧೇರಿ ಪ್ರದೇಶದ ಲೋಖಂಡವಾಲಾ ಕಾಂಪ್ಲೆಕ್ಸ್‌ನ 4 ನೇ ಅಡ್ಡ ರಸ್ತೆಯಲ್ಲಿರುವ ರಿಯಾ ಪ್ಯಾಲೇಸ್ ಕಟ್ಟಡದ 10 ನೇ ಮಹಡಿಯಲ್ಲಿ ಬೆಳಿಗ್ಗೆ 8 ಗಂಟೆ ಸುಮಾರಿಗೆ ಬೆಂಕಿ ಕಾಣಿಸಿಕೊಂಡಿದೆ ಎಂದು ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.
ಬೆಂಕಿಯಿಂದ ಗಾಯಗೊಂಡಿದ್ದ ಮೂವರನ್ನು ಕೂಪರ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಅಲ್ಲಿ ಅವರು ಮೃತಪಟ್ಟಿದ್ದಾರೆ ಎಂದು ವೈದ್ಯರು ಘೋಷಿಸಿರುವುದಾಗಿ ನಾಗರಿಕ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಮೃತರನ್ನು ಚಂದ್ರಪ್ರಕಾಶ್ ಸೋನಿ (74), ಕಾಂತಾ ಸೋನಿ (74) ಮತ್ತು ಪೆಲುಬೇಟ (42) ಎಂದು ಗುರುತಿಸಲಾಗಿದೆ ಎಂದು ನಾಗರಿಕ ಅಧಿಕಾರಿಗಳು ತಿಳಿಸಿದ್ದಾರೆ.
ಬೆಳಗ್ಗೆ 9 ಗಂಟೆ ಸುಮಾರಿಗೆ ಬೆಂಕಿ ನಂದಿಸಲಾಯಿತು ಎಂದು ಅಗ್ನಿಶಾಮಕ ದಳದ ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಬೆಂಕಿಗೆ ಕಾರಣ ಇನ್ನೂ ತಿಳಿದುಬಂದಿಲ್ಲ ಪ್ರಾಥಮಿಕ ತನಿಖೆಯ ಪ್ರಕಾರ ಶಾರ್ಟ್ ಸರ್ಕ್ಯೂಟ್‌ನಿಂದ ಬೆಂಕಿ ಅವಘಡ ಸಂಭವಿಸಿರಬಹುದು ಎಂದು ಶಂಕಿಸಲಾಗಿದೆ. ಹೆಚ್ಚಿನ ಮಾಹಿತಿ ಕಲೆ ಹಾಕಲಾಗುತ್ತಿದೆ ಸದ್ಯ ಸ್ಥಳದಲ್ಲಿ ರಕ್ಷಣಾ ಕಾರ್ಯಾಚರಣೆ ನಡೆಯುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *