Breaking News

ಶಿವಮೊಗ್ಗದಲ್ಲಿ ಅ.18 ರಿಂದ ಕೃಷಿ ಮತ್ತು ತೋಟಗಾರಿಕಾ ಮೇಳ

ಶಿವಮೊಗ್ಗ : ಕೆಳದಿ ಶಿವಪ್ಪ ನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಶಿವಮೊಗ್ಗವು ಕೃಷಿ ಹಾಗೂ ಕೃಷಿ ಸಂಬಂಧಿತ ಅಭಿವೃದ್ಧಿ ಇಲಾಖೆಗಳ ಸಹಯೋಗದೊಂದಿಗೆ ಅಕ್ಟೋಬರ್ 18 ರಿಂದ 21 ರವರೆಗೆ ನಾಲ್ಕು ದಿನಗಳ ಕೃಷಿ ಮತ್ತು ತೋಟಗಾರಿಕಾ ಮೇಳ-2024ನ್ನು ಪೌಷ್ಠಿಕ ಆಹಾರಕ್ಕಾಗಿ ವಿಕಸಿತ ಕೃಷಿ ಎಂಬ ಧೈಯವಾಕ್ಯದೊಂದಿಗೆ ಕೃಷಿ ಮಹಾವಿದ್ಯಾಲಯದ ನವುಲೆ ಆವರಣದಲ್ಲಿ ಆಚರಿಸಲು ಉದ್ದೇಶಿಸಿದೆ ಎಂದು ವಿಶ್ವವಿದ್ಯಾಲಯದ ಕುಲಪತಿ ಡಾ.ಆರ್.ಸಿ.ಜಗದೀಶ್ ಹೇಳಿದರು.
ವಿಶ್ವವಿದ್ಯಾಲಯದ ಸಭಾಂಗಣದಲ್ಲಿ ಮಾತನಾಡಿದ ಅವರು ಈ ಕೃಷಿ ಮೇಳವನ್ನು ವಿಶೇಷವಾಗಿರುವಂತೆ ರೂಪಿಸಿ ಆಯೋಜಿಸಲಾಗುತ್ತಿದೆ ವಿಶೇಷವಾಗಿ ಈ ಮೇಳದಲ್ಲಿ ತಂತ್ರಜ್ಞಾನ ಉದ್ಯಾನವನ, ಸಮಗ್ರ ಕೃಷಿ ಪದ್ಧತಿ, ಸಂರಕ್ಷಿತ ಕೃಷಿ, ಹೈ-ಟೆಕ್ ತೋಟಗಾರಿಕೆ-ಹೈಡೋಫೋನಿಕ್ ಕೃಷಿ, ಪುಷ್ಪ ಕೃಷಿ, ಜೇನು ಸಾಕಾಣಿಕೆ ಮತ್ತು ಕೀಟ ಪ್ರಪಂಚ, ದ್ವಿದಳ ಧಾನ್ಯ ತಳಿ ಪ್ರಾತ್ಯಕ್ಷಿಕೆ, ಸಿರಿಧಾನ್ಯಗಳ ಮಹತ್ವ, ಗೋಡಂಬಿ ಬೆಳೆ ಪ್ರಾತ್ಯಕ್ಷಿಕೆ, ಸಂಸ್ಕರಣೆ ಮತ್ತು ಮೌಲ್ಯವರ್ಧನೆ, ಸಾವಯವ ಕೃಷಿ, ಅಣಬೆ ಬೇಸಾಯ, ಸಮಗ್ರ ಜಲಾನಯನ ಅಭಿವೃದ್ಧಿ, ಪಶುಸಂಗೋಪನೆ ಮತ್ತು ಮೀನುಗಾರಿಕೆ ತಂತ್ರಜ್ಞಾನಗಳು, ಕೊಲ್ಲೋತ್ತರ ತಾಂತ್ರಿಕತೆ, ಕೃಷಿ ಉತ್ಪನ್ನ ಸಂಸ್ಕರಣೆ, ಮೌಲ್ಯವರ್ಧಿತ ಕೃಷಿ ಉತ್ಪನ್ನಗಳು, ಹವಾಮಾನ ಆಧಾರಿತ ಕೃಷಿ, ಅಡಿಕೆಯಲ್ಲಿ ಬಹುಸ್ತರೀಯ ಪದ್ಧತಿ, ಅಡಿಕೆ ಬೆಳೆಯ ಸಮಗ್ರ ಕೃಷಿ ಪದ್ಧತಿ, ಪಾರಂಪರಿಕ ಅಡಿಕೆ ಸಂಸ್ಕರಣಾ ಕ್ರಮಗಳು, ಅಡಿಕೆಯ ವಿವಿಧ ತಳಿಗಳು, ಅಡಿಕೆ ಸಂಸ್ಕರಣೆ ಹಾಗೂ ಮೌಲ್ಯವರ್ಧಿತ ಉತ್ಪನ್ನಗಳು, ಕೃಷಿ ಪರಿಕರ ಮತ್ತು ಯಂತ್ರೋಪಕರಣಗಳ ಪ್ರದರ್ಶನ ಏರ್ಪಡಿಸಲಾಗಿದೆ ಅಲ್ಲದೇ ಶ್ರೇಷ್ಟ ರೈತ ಮತ್ತು ರೈತ ಮಹಿಳೆಯರಿಗೆ ಪ್ರಶಸ್ತಿ ಪ್ರಧಾನ ಸಮಾರಂಭವನ್ನು ಏರ್ಪಡಿಸಲಾಗಿದೆ ಅಲ್ಲದೇ ಕೃಷಿ ಮೇಳದ ತಾಂತ್ರಿಕ ಸಮಾವೇಶದಲ್ಲಿ ರೈತರ ಸಮಸ್ಯೆಗಳಿಗೆ ತಜ್ಞರಿಂದ ಸಲಹೆಯನ್ನು ಕೊಡಿಸಲಾಗುವುದು ಎಂದರು.
ಕೃಷಿಯಿಂದ ಪೋಷಕಾಂಶ-ಭರಿತ ಉತ್ಪಾದಕತೆ ಮತ್ತು ಗುಣಮಟ್ಟವನ್ನು ಸುಧಾರಿಸುವ ಮೇಲೆ ಕೇಂದ್ರೀಕರಿಸುವ ಕೃಷಿ ಮತ್ತು ಆಹಾರ ಉತ್ಪಾದನಾ ನೀತಿಗಳು ಅವುಗಳ ಉತ್ಪಾದನೆಯನ್ನು ಹೆಚ್ಚಿಸುತ್ತವೆ ಇದಲ್ಲದೆ, ಈ ಸಮೃದ್ಧ ಪೌಷ್ಟಿಕಾಂಶದ ಪದಾರ್ಥಗಳನ್ನು ಸೇವಿಸುವ ಜನರು ತಮ್ಮ ಪೌಷ್ಟಿಕಾಂಶವನ್ನು ಸುಧಾರಿಸಲು ಮತ್ತು ಆರೋಗ್ಯಕರವಾಗಿ ಬದುಕಲು ನಾಗರಿಕರಿಗೆ ಸಹಾಯ ಮಾಡುತ್ತದೆ. ಆಹಾರವು ಕೃಷಿ ಪದ್ಧತಿಗಳ ಪ್ರಮುಖ ಉಪ ಉತ್ಪನ್ನವಾಗಿದೆ ಮತ್ತು ಇದರ ಪರಿಣಾಮವಾಗಿ, ಆರೋಗ್ಯಕರ ಪೋಷಣೆಯ ಪ್ರಮುಖ ಅಂಶವಾಗಿದೆ. ಹೆಚ್ಚಿನ ಪುರಾವೆಗಳು, ಸಂಶೋಧನೆಯು ಕೇವಲ ಆಹಾರವನ್ನು ಹೊಂದಿರುವುದಕ್ಕಿಂತ ಹೆಚ್ಚಿನ ಪೋಷಣೆಯಿದೆ ಎಂದು ತೋರಿಸುತ್ತದೆ. ಜನರು ಸೇವಿಸುವ ಆಹಾರವು ಪೌಷ್ಟಿಕವಾಗಿರಬೇಕು ಅಂದರೆ, ಆಹಾರವು ಸರಿಯಾದ ಬೆಳವಣಿಗೆ ಮತ್ತು ಬೆಳವಣಿಗೆಗೆ ನಮ್ಮ ದೇಹಕ್ಕೆ ಅಗತ್ಯವಿರುವ ಎಲ್ಲಾ ಅಂಶಗಳನ್ನು ಮತ್ತು ಪೋಷಣೆಯನ್ನು ಹೊಂದಿರುತ್ತದೆ. ಆದ್ದರಿಂದ, ನಾವು ಸೇವಿಸುವ ಆಹಾರವು ಸರಿಯಾದ ಪೋಷಕಾಂಶಗಳೊಂದಿಗೆ ಸಮತೋಲನದಲ್ಲಿರಬೇಕು. ಈ ಸಂದರ್ಭದಲ್ಲಿ ಅತಿ ಹೆಚ್ಚು ಸೂಕ್ತ ರಾಗಿ, ಜೋಳ, ಸಿರಿಧಾನ್ಯಗಳು, ದ್ವಿದಳ ಧಾನ್ಯಗಳನ್ನು ಹೆಚ್ಚಾಗಿ ಬೆಳೆಯುವುದರಿಂದ ವಿಕಸಿತ ಕೃಷಿಯನ್ನು ಕಾಪಾಡಿಕೊಳ್ಳಲು ಸಾದ್ಯವಾಗುತ್ತದೆ ಎಂಬಂತಹ ವಿಚಾರಗಳನ್ನು ಈ ಕೃಷಿ-ತೋಟಗಾರಿಕೆ ಮೇಳದಲ್ಲಿ ಮನದಟ್ಟು ಮಾಡಲು ಪ್ರಯತ್ನಿಸಿದ್ದೇವೆ ಎಂದು ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *