Breaking News

ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆ: ಸಾಂಕ್ರಾಮಿಕ ರೋಗ ಭೀತಿ

ಮುಳಗುಂದ: ಸಮೀಪದ ಚಿಂಚಲಿ ಗ್ರಾಮದಲ್ಲಿ ಸ್ವಚ್ಛತೆ ಮರೀಚಿಕೆಯಾಗಿದ್ದು, ಸಾರ್ವಜನಿಕರು ಸಾಂಕ್ರಾಮಿಕ ರೋಗ ಹರಡುವ ಭೀತಿಯಲ್ಲಿ ಕಾಲ ಕಳೆಯುವಂತಾಗಿದೆ.
ಇಲ್ಲಿನ ಬಹುತೇಕ ಚರಂಡಿಗಳಲ್ಲಿ ಹೂಳು ತುಂಬಿಕೊಂಡಿದೆ ಕೊಳಚೆ ನೀರು ಮುಂದೆ ಸಾಗದೆ, ಅಲ್ಲೇ ನಿಂತು ದುರ್ನಾತ ಬೀರುತ್ತಿದೆ.
ಕೆಲವೆಡೆ ಸಿಸಿ ರಸ್ತೆ ಮೇಲೆ ಕೊಳಚೆ ನೀರು ಹರಿಯುತ್ತಿದ್ದು, ಗ್ರಾಮ ಪಂಚಾಯಿತಿ ಹತ್ತಿರದ ಚರಂಡಿಯಲ್ಲಿ ಹುಲ್ಲು ಬೆಳೆದು ಹಲವು ತಿಂಗಳೇ ಆದರೂ ಸ್ವಚ್ಛತೆಗೆ ಗ್ರಾಮ ಪಂಚಾಯಿತಿ ಮುಂದಾಗಿಲ್ಲ.
ಪ್ರಾಥಮಿಕ ಆರೋಗ್ಯ ಕೇಂದ್ರದ ಸುತ್ತಲೂ ಜಾಲಿಗಿಡ, ಪಾರ್ಥೇನಿಯಂ ಬೆಳೆದು ನಿಂತಿದೆ. ಗೇಟ್ ಬಳಿ ಗೋಡೆ ಕಾಮಗಾರಿ ಅಪೂರ್ಣವಾಗಿದೆ ಅಂಗನವಾಡಿ ಕಟ್ಟಡ ಶಿಥಿಲಗೊಂಡಿದ್ದು, ಮೂಲಸೌಕರ್ಯ ಇಲ್ಲ ಗ್ರಾಮ ಪಂಚಾಯಿತಿ ಆವರಣದಲ್ಲಿ ಜಾಹೀರಾತು ಫಲಕ ಮುರಿದು ಬೀಳುವ ಹಂತದಲ್ಲಿದೆ. ಆದರೂ ಸಂಬಂಧಪಟ್ಟವರು ಕ್ರಮ ವಹಿಸುತ್ತಿಲ್ಲ ಎಂಬುದು ಗ್ರಾಮಸ್ಥರ ಆರೋಪವಾಗಿದೆ.
ಗ್ರಾಮದಲ್ಲಿ ಸುಗಮ ಸಂಚಾರಕ್ಕಾಗಿ ವಿವಿದೇಡೆ ಸಿಸಿ ರಸ್ತೆ, ಚರಂಡಿ ನಿರ್ಮಿಸಿದ್ದಾರೆ. ತೇರಿನಗಡ್ಡಿ ಮನೆ ಹತ್ತಿರ ಕೊಳಚೆ ಹಾಗೂ ಮಳೆ ನೀರು ಸರಾಗವಾಗಿ ಹರಿದು ಹೋಗುತ್ತಿಲ್ಲ. ಅವೈಜ್ಞಾನಿಕ ಕಾಮಗಾರಿ ಮಾಡಲಾಗಿದೆ ನೀರು ಮುಂದೆ ಸಾಗಲು ಚರಂಡಿ ಸಹ ಇಲ್ಲ ನಿಂತ ನೀರು ಸೊಳ್ಳೆಗಳ ಉತ್ಪತ್ತಿ ತಾಣವಾಗಿದೆ. ಇದೇ ಸ್ಥಳದಲ್ಲೇ ವಾರದ ಸಂತೆ ನಡೆಯುತ್ತಿದ್ದು, ತ್ಯಾಜ್ಯದಿಂದ ಚರಂಡಿಗಳು ತುಂಬಿಕೊಡಿವೆ ಸ್ವಚ್ಛತೆ ಕೈಗೊಳ್ಳಬೇಕಿದ್ದ ಗ್ರಾಮ ಪಂಚಾಯಿತಿ ನಿರ್ಲಕ್ಷ್ಯ ವಹಿಸಿದೆ ಎಂದು ಗ್ರಾಮದ ಕಾಶಪ್ಪ ಶಿವಳ್ಳಿ ಆರೋಪಿಸಿದರು.
ಇಲ್ಲಿನ ಗ್ರಾಮ ಪಂಚಾಯಿತಿ ಸ್ವಚ್ಛತೆಗೆ ಯಾವುದೇ ಕ್ರಮ ಕೈಗೊಂಡಿಲ್ಲ ಸೊಳ್ಳೆ ನಾಶಕವನ್ನೂ ಸಿಂಪಡಿಸುತ್ತಿಲ್ಲ ಡೆಂಗಿ ಸೇರಿದಂತೆ ಸಾಂಕ್ರಾಮಿಕ ರೋಗ ಹರಡುವ ಭೀತಿ ಇದೆ ಎಂದರು.
ಚಿಂಚಲಿಯಲ್ಲಿ ಸ್ವಚ್ಛತೆ ಚರಂಡಿ ಹೂಳು ತೆಗೆಸಲು ಗ್ರಾಮ ಪಂಚಾಯಿತಿ ಸಿಬ್ಬಂದಿಗೆ ಸೂಚನೆ ನೀಡಲಾಗುವುದು ನೈರ್ಮಲ್ಯ ಕಾಪಾಡಲು ಎಲ್ಲರೂ ಕೈಜೋಡಿಸಬೇಕು ಎಂದು ತಾಲ್ಲೂಕು ಪಂಚಾಯಿತಿ ಕಾರ್ಯನಿರ್ವಾಹಕ ಅಧಿಕಾರಿ ಮಲ್ಲಯ್ಯ ಕೊರಣ್ಣವರ ತಿಳಿಸಿದರು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *