ನವಲಗುಂದ: ಎಲ್ಲ ಕ್ಷೇತ್ರದಲ್ಲೂ ಮಹಿಳೆಯರು ಉತ್ತಮ ಸಾಧನೆ ಮಾಡುತ್ತಿದ್ದು, ಮಹಿಳೆಯರ ಶಿಕ್ಷಣಕ್ಕೆ ನಮ್ಮ ಸರ್ಕಾರ ಹೆಚ್ಚಿನ ಆದ್ಯತೆ ನೀಡುತ್ತಿದೆ ಎಂದು ಶಾಸಕ ಎನ್.ಎಚ್.ಕೋನರಡ್ಡಿ ಹೇಳಿದರು.
ಪಟ್ಟಣದ ಗವಿಮಠ ದಾಸೋಹ ಭವನದಲ್ಲಿ ತಾಲ್ಲೂಕು ಆಡಳಿತ, ತಾಲ್ಲೂಕು ಪಂಚಾಯಿತಿ, ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಹಾಗೂ ಶಿಶು ಅಭಿವೃದ್ಧಿ ಯೋಜನೆ ಸಹಯೋಗದಲ್ಲಿ ಹಮ್ಮಿಕೊಂಡಿದ್ದ ಅಂತರರಾಷ್ಟ್ರೀಯ ಹೆಣ್ಣುಮಕ್ಕಳ ದಿನಾಚರಣೆ ಹಾಗೂ ‘ಮಗಳನ್ನು ಉಳಿಸಿ ಮಗಳನ್ನು ಓದಿಸಿ’ ಜಾಗೃತಿ ಕಾರ್ಯಕ್ರಮ ಉದ್ಘಾಟಿಸಿ ಅವರು ಮಾತನಾಡಿದರು.
ಗವಿಮಠದ ಬಸವಲಿಂಗ ಸ್ವಾಮೀಜಿ ಆಶೀರ್ವಚನ ನೀಡಿದರು. ಶಿಶು ಅಭಿವೃದ್ಧಿ ಯೋಜನಾಧಿಕಾರಿ ಗಾಯತ್ರಿದೇವಿ ಪಾಟೀಲ ಅಧ್ಯಕ್ಷತೆ ವಹಿಸಿದ್ದರು. ಶಾಂತಲಾ ಸೋಮನಕಟ್ಟಿ ಹಾಗೂ ರೇಣುಕಾ ಭಾಜಿರಾಹುತ್ ಉಪನ್ಯಾಸ ನೀಡಿದರು.
ಕ್ಷೇತ್ರ ಶಿಕ್ಷಣಾಧಿಕಾರಿ ಎಸ್.ಬಿ.ಮಲ್ಲಾಡ, ಗ್ಯಾರಂಟಿ ಅನುಷ್ಠಾನ ಸಮಿತಿ ಅಧ್ಯಕ್ಷ ಶಿವಾನಂದ ಭೂಮನ್ನವರ, ಪದ್ಮಾ ಕಿಲ್ಲೇದಾರ, ಭಾರತಿ ಕಾಲಶೆಟ್ಟಿ, ಪ್ರಕಾಶ ಮೇಲಿನಮನಿ, ನಾಗರತ್ನ ಯಲವಿಗಿ, ರೇಣುಕಾ ಮರಳುಸಿದ್ದೇಶ್ವರಮಠ, ಸವಿತಾ ಮುನವಳ್ಳಿ,
bigtvnews | Hubli Dharwad News | Kannada News | Karnataka News Hubli News | News In Hubli | Local news

