ಹುಬ್ಬಳ್ಳಿ: ಹಳೇ ಹುಬ್ಬಳ್ಳಿ ಗಲಭೆ ಕೇಸನ್ನು ರಾಜ್ಯ ಸರ್ಕಾರ ಹಿಂದೆ ಪಡೆದುಕೊಂಡ ಕ್ರಮವನ್ನು ಖಂಡಿಸಿ ಇಂದು ಶ್ರೀರಾಮ ಸೇನೆಯು ಪ್ರತಿಭಟನೆ ಹಮ್ಮಿಕೊಂಡಿದೆ. ಈ ಹಿನ್ನೆಲೆ ಹಳೇ ಹುಬ್ಬಳ್ಳಿ ಇಂಡಿ ಪಂಪ ಬಳಿಯಲ್ಲಿ ಪೊಲೀಸ್ ಇಲಾಖೆಯಿಂದ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
2022ರಲ್ಲಿ ನಡೆದ ಈ ಹಳೇ ಹುಬ್ಬಳ್ಳಿ ಗಲಾಟೆಯಲ್ಲಿ ಹನುಮಾನ ದೇವಸ್ಥಾನಕ್ಕೂ ಕಿಡಗೇಡಿಗಳು ಕಲ್ಲು ತೂರಾಟ ನಡೆಸಿ ದೇವಸ್ಥಾನದ ಗಾಜುಗಳನ್ನು ಪುಡಿ ಪುಡಿ ಮಾಡಲಾಗಿತ್ತು. ಅಷ್ಟೇ ಅಲ್ಲದೇ ಈ ಸಂದರ್ಭದಲ್ಲಿ ಪೊಲೀಸರ ಮೇಲೆ ಕಲ್ಲು ತೂರಾಟ ಆಗಿ ಇಬ್ಬರು ಪೊಲೀಸ್ ಸಿಬ್ಬಂದಿಗೆ ಗಾಯವಾಗಿತ್ತು. ಸರ್ಕಾರಿ ವಾಹನಗಳು ಕೂಡಾ ಜಖಂಗೊಂಡಿದ್ದವು. ಆದ್ರೆ ರಾಜ್ಯ ಸರ್ಕಾರ ಮಾತ್ರ ಈ ಪ್ರಕರಣವನ್ನು ಗಂಭೀರ ಎಂದು ಪರಿಗಣಿಸದೆ ಆರೋಪಿಗಳ ಪರವಾಗಿ ನಿಂತು ಅವರನ್ನು ರಕ್ಷಿಸುವ ಕಾರ್ಯವನ್ನು ಮಾಡುತ್ತಿದೆ ಎಂದು ಆರೋಪಿಸಿ ರಾಜ್ಯ ಸರ್ಕಾರದ ವಿರುದ್ಧ ಪ್ರಮೋದ್ ಮುತಾಲಿಕ್ ನೇತೃತ್ವದಲ್ಲಿ ಶ್ರೀರಾಮ ಸೇನೆಯಿಂದ ಪ್ರತಿಭಟನೆಗೆ ಮುಂದಾಗಿದೆ. ಹೀಗಾಗಿ ಪೊಲೀಸ್ ಇಲಾಖೆಯಿಂದ ಅಹಿತಕರ ಘಟನೆ ನಡೆಯದಂತೆ ಸೂಕ್ತ ಬಂದೋಬಸ್ತ್ ವ್ಯವಸ್ಥೆ ಮಾಡಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

