ಹುಬ್ಬಳ್ಳಿ: ನಗರದ ವಿಜಯನಗರದಲ್ಲಿ ಮನೆ ಕೀಲಿ ಮುರಿದು 1ಲಕ್ಷ 15 ಸಾವಿರ ರೂಪಾಯಿ ಮೌಲ್ಯದ ಆಭರಣ ಕಳ್ಳತನ ಮಾಡಿದ ಘಟನೆ ನಡೆದಿದೆ. ವಿಜಯನಗರದ ಶಂಬಯ್ಯ ಬಾಡದಮಠ ಎಂಬುವರ ಮನೆಯಲ್ಲಿ ಕಳ್ಳತನವಾಗಿದೆ. ಮನೆಯಲ್ಲಿದ್ದ 1 ಲಕ್ಷ ಮೌಲ್ಯದ ಬೆಳ್ಳಿ, ಬಂಗಾರ ಸ್ವಲ್ಪ ಹಣ ಕಳ್ಳತನ ಮಾಡಲಾಗಿದೆ. ಈ ಕುರಿತು ಅಶೋಕನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

