ನವದೆಹಲಿ : ಕೇಂದ್ರ ಸರ್ಕಾರಿ ನೌಕರರಿಗೆ ಭರ್ಜರಿ ಗುಡ್ ನ್ಯೂಸ್ ಸಿಕ್ಕಿದ್ದು, ಶೇ.3ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಸಚಿವ ಸಂಪುಟ ಸಭೆ ಇಂದು ಅನುಮೋದನೆ ನೀಡಿದೆ.
ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ನೌಕರರಿಗೆ ಸಿಹಿ ಸುದ್ದಿ ನೀಡಿದೆ. ತುಟ್ಟಿ ಭತ್ಯೆ ಹೆಚ್ಚಳಕ್ಕೆ ಅನುಮೋದನೆ ನೀಡಲಾಗಿದ್ದು ಶೇಕಡ 3 ರಷ್ಟು ತುಟ್ಟಿಭತ್ಯೆ ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಒಪ್ಪಿಗೆ ನೀಡಿದೆ.
ಇಂದು ನಡೆದ ಕೇಂದ್ರ ಸಚಿವ ಸಂಪುಟ ಸಭೆಯಲ್ಲಿ ಈ ನಿರ್ಧಾರ ಕೈಗೊಳ್ಳಲಾಗಿದೆ. ದೀಪಾವಳಿಗೆ ಮುಂಚಿತವಾಗಿ ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ತುಟ್ಟಿಭತ್ಯೆ (ಡಿಎ) ಯಲ್ಲಿ ಶೇಕಡಾ 3 ರಷ್ಟು ಹೆಚ್ಚಳವನ್ನು ಕೇಂದ್ರ ಸಚಿವ ಸಂಪುಟ ಘೋಷಿಸಿದೆ. ಈ ಹೆಚ್ಚಳವು ಡಿಎಯನ್ನು ಮೂಲ ವೇತನದ ಶೇಕಡಾ 42 ರಿಂದ 45 ಕ್ಕೆ ಹೆಚ್ಚಿಸುತ್ತದೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

