Breaking News

ರಾಜ್ಯ ಸರ್ಕಾರದಿಂದ ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣಕ್ಕೆ ಸಚಿವರ ನೇಮಕ

ಬೆಂಗಳೂರು: ರಾಜ್ಯ ಸರ್ಕಾರದಿಂದ ನವೆಂಬರ್ 1, 2024 ರಂದು ಕನ್ನಡ ರಾಜ್ಯೋತ್ಸವದಂದು ಜಿಲ್ಲಾ ಕೇಂದ್ರಗಳಲ್ಲಿ ಧ್ವಜಾರೋಹಣ ಮಾಡಲು ಸಚಿವರನ್ನು ನೇಮಕ ಮಾಡಿ ಆದೇಶಿಸಿದೆ.
ಈ ಕುರಿತಂತೆ ರಾಜ್ಯ ಶಿಷ್ಠಾಚಾರದ ಸರ್ಕಾರದ ಅಧೀನ ಕಾರ್ಯದರ್ಶಿ ಅವರು ಸರ್ಕಾರದ ಮುಖ್ಯ ಕಾರ್ಯದರ್ಶಿಯವರ ಸೂಚನೆಯಂತೆ ಎಲ್ಲಾ ಜಿಲ್ಲೆಗಳ ಜಿಲ್ಲಾಧಿಕಾರಿಗಳು, ಪೊಲೀಸ್ ಆಯುಕ್ತರಿಗೆ ಆದೇಶ ಹೊರಡಿಸಿದ್ದಾರೆ.
ನವೆಂಬರ್.1, 2024ರಂದು ಕನ್ನಡ ರಾಜ್ಯೋತ್ಸವ ದಿನದ ಪ್ರಯುಕ್ತ ರಾಜ್ಯದ ಜಿಲ್ಲಾ ಕೇಂದ್ರಗಳಲ್ಲಿ ಆದರೇ ಬೆಂಗಳೂರು ನಗರ ಜಿಲ್ಲೆ ಹೊರತುಪಡಿಸಿ, ಸಚಿವರುಗಳನ್ನು ಧ್ವಜಾರೋಹಣ ಮಾಡಲು ನೇಮಿಸಲಾಗಿದೆ ಎಂದು ತಿಳಿಸಿ, ನಿರ್ದೇಶಿಸಿದ್ದಾರೆ.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *