Breaking News

ಲಾಡ್ಜ್ ನಲ್ಲಿ ಕಾಲೇಜು ವಿದ್ಯಾರ್ಥಿ ಆತ್ಮಹತ್ಯೆ

ಕಲಬುರಗಿ: ನಗರದ ರೈಲ್ವೆ ನಿಲ್ದಾಣ ಸಮೀಪದ ಲಾಡ್ಜ್‌ವೊಂದರಲ್ಲಿ ಕಾಲೇಜು ವಿದ್ಯಾರ್ಥಿಯೊಬ್ಬ ನೇಣು ಹಾಕಿಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ವಿಜಯಪುರ ನಗರದ ಬೋತ್ರಾ ಕಾಲೊನಿ ನಿವಾಸಿ, ಕಲಬುರಗಿಯ ಖಾಸಗಿ ಕಾಲೇಜೊಂದರಲ್ಲಿ ಡಿ. ಫಾರ್ಮಾ ಓದುತ್ತಿದ್ದ ಸುಯೋಗ ಚಂದ್ರಕಾಂತ ಆತ್ಮಹತ್ಯೆ ಮಾಡಿಕೊಂಡವರು.
ಸ್ಟೇಷನ್ ಬಜಾರ್ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಸುಯೋಗ ವಿಜಯಪುರ ನಗರದಲ್ಲೇ ಉಳಿದುಕೊಂಡು ಆಗಾಗ ಕಾಲೇಜಿಗೆ ಬಂದು ಹೋಗುತ್ತಿದ್ದರು. ಅಕ್ಟೋಬರ್ 11ರ ಸಂಜೆ 6ಕ್ಕೆ ಹೊರಗೆ ಹೋಗುವುದಾಗಿ ಪೋಷಕರಿಗೆ ತಿಳಿಸಿದ ಸುಯೋಗ, ಕಲಬುರಗಿಗೆ ಬಂದರು ಪೋಷಕರು ಹಲವು ಬಾರಿ ಫೋನ್ ಕರೆ ಮಾಡಿದರೂ ಸ್ವೀಕರಿಸಲಿಲ್ಲ. ಎರಡು ದಿನಗಳ ಬಳಿಕ (ಅ.13) ಲಾಡ್ಜ್‌ನಲ್ಲಿ ನೇಣು ಹಾಕಿಕೊಂಡ ಸ್ಥಿತಿಯಲ್ಲಿ ಶವ ಪತ್ತೆಯಾಗಿದೆ. ಜೀವನದಲ್ಲಿ ಜಿಗುಪ್ಸೆಗೊಂಡು ಆತ್ಮಹತ್ಯೆ ಮಾಡಿಕೊಂಡಿರಬಹುದು ಎಂದು ಪೋಷಕರು ದೂರು ಕೊಟ್ಟಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

Share News

About bigtvnews22

Check Also

ಶಿಶು ಅಭಿವೃದ್ಧಿ ಯೋಜನಾಧಿಕಾರಿಯಿಂದ ಲೈಂಗಿಕ ದೌರ್ಜನ್ಯ: ಮಹಿಳಾ ವಾರ್ಡನ್‌ ದೂರು

ಬೆಳಗಾವಿ: ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆಯ ಶಿಶು ಅಭಿವೃದ್ಧಿ ಯೋಜನಾಧಿಕಾರಿಯೊಬ್ಬರು ತನಗೆ ಲೈಂಗಿಕ ಕಿರುಕುಳ ನೀಡಿದ್ದಾರೆ, ಜನಾಂಗೀಯ ನಿಂದಣೆ …

Leave a Reply

Your email address will not be published. Required fields are marked *