Breaking News

ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶಾಂತಿ ಸ್ಥಿರತೆಯ ಅಗತ್ಯವಿದೆ: ಕೇಂದ್ರ ಸಚಿವ ಜೈಶಂಕರ್

ಪಾಕಿಸ್ತಾನ: ಇಸ್ಲಾಮಾಬಾದ್‌ನಲ್ಲಿ ನಡೆದ ಎಸ್‌ಸಿಒ ಶೃಂಗಸಭೆಯಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಬುಧವಾರ ಪಾಕಿಸ್ತಾನದ ವಿರುದ್ಧ ಪರೋಕ್ಷವಾಗಿ ವಾಗ್ದಾಳಿ ನಡೆಸಿದ್ದು, ಗಡಿಯಾಚೆಗಿನ ಚಟುವಟಿಕೆಗಳು ಭಯೋತ್ಪಾದನೆ, ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ ವ್ಯಾಪಾರವನ್ನು ಉತ್ತೇಜಿಸಲು ಸಾಧ್ಯವಿಲ್ಲ ಎಂದು ಹೇಳಿದ್ದಾರೆ.
ಎರಡು ರಾಷ್ಟ್ರಗಳ ನಡುವಿನ ಗಡಿಯಾಚೆಗಿನ ಚಟುವಟಿಕೆಗಳು ಉಗ್ರವಾದ ಮತ್ತು ಪ್ರತ್ಯೇಕತಾವಾದದಿಂದ ಕೂಡಿದ್ದರೆ, ಅದು ದ್ವಿಪಕ್ಷೀಯ ವ್ಯಾಪಾರ, ಸಂಬಂಧಗಳಿಗೆ ಸಹಕಾರಿಯಲ್ಲ ಎಂದು ವಿದೇಶಾಂಗ ಸಚಿವ ಎಸ್​ ಜೈಶಂಕರ್ ಹೇಳಿದ್ದಾರೆ. ಪಾಕಿಸ್ತಾನದಲ್ಲಿ ನಡೆಯುತ್ತಿರುವ ಎಸ್​ಸಿಒ ಶೃಂಗಸಭೆಯಲ್ಲಿ ಪಾಲ್ಗೊಂಡು ಮಾತನಾಡಿದ ಅವರು, ಅಭಿವೃದ್ಧಿ ಮತ್ತು ಬೆಳವಣಿಗೆಗೆ ಶಾಂತಿ ಮತ್ತು ಸ್ಥಿರತೆಯ ಅಗತ್ಯವಿದೆ ಎಂಬುದು ಮೂಲತತ್ವವಾಗಿದೆ ಎಂದರು.
ಏಕಪಕ್ಷೀಯ ಅಜೆಂಡಾಗಳ ಮೂಲಕ ಸಂಬಂಧಗಳು ಪ್ರಗತಿ ಹೊಂದಲು ಸಾಧ್ಯವಿಲ್ಲ, ಅಭಿವೃದ್ಧಿ ಮತ್ತು ಪ್ರಗತಿಗೆ ಶಾಂತಿ ಮತ್ತು ಸ್ಥಿರತೆ ಅಗತ್ಯ ಎಂಬುದರಲ್ಲಿ ಸಂದೇಹವಿಲ್ಲ ಎಂದು ಹೇಳಿದರು. ಈ ಕೆಲಸಗಳು ಆಗದಿದ್ದರೆ ಅಭಿವೃದ್ಧಿಯ ಮಾತೇ ಇಲ್ಲ ಎಂದು ಹೇಳಿದರು.
ಎರಡು ದೇಶಗಳ ನಡುವೆ ವಿಶ್ವಾಸದ ಕೊರತೆಯಿದ್ದರೆ ಆತ್ಮಾವಲೋಕನ ಮಾಡಿಕೊಳ್ಳಬೇಕು ಎಂದು ಜೈಶಂಕರ್ ಒತ್ತಿ ಹೇಳಿದರು.
ರಷ್ಯಾ ಮತ್ತು ಉಕ್ರೇನ್ ನಡುವೆ ನಡೆಯುತ್ತಿರುವ ಘರ್ಷಣೆಗಳು ಮತ್ತು ಮಧ್ಯಪ್ರಾಚ್ಯ ಉದ್ವಿಗ್ನತೆಯ ಬಗ್ಗೆ ಮಾತನಾಡಿದ ಅವರು, ಎಸ್‌ಸಿಒ ಸಭೆಯು ವಿಶ್ವ ವ್ಯವಹಾರಗಳಲ್ಲಿ ಕಠಿಣ ಸಮಯದಲ್ಲಿ ನಡೆಯುತ್ತಿದೆ ಎಂದು ಹೇಳಿದರು.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *