Breaking News

ಜಮ್ಮು ಕಾಶ್ಮೀರದ ಸಿಎಂ ಒಮರ್ ಅಬ್ದುಲ್ಲಾಗೆ ಅಭಿನಂದನೆ ಸಲ್ಲಿಸಿದ ಮಾಜಿ ಪ್ರಧಾನಿ ಎಚ್ ಡಿ ದೇವೇಗೌಡ

ನವದೆಹಲಿ: ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ಇಂದು ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಮಾಜಿ ಪ್ರಧಾನಿ ಎಚ್.ಡಿ.ದೇವೇಗೌಡ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ ನಲ್ಲಿ ಮಾಜಿ ಪ್ರಧಾನಿ ದೇವೇಗೌಡ ಪೋಸ್ಟ್ ಮಾಡಿದ್ದಾರೆ.
ಜಮ್ಮುಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಅವರು ಈ ಪ್ರದೇಶದಲ್ಲಿ ಶಾಂತಿ ಮತ್ತು ಅಭಿವೃದ್ಧಿ ತರುತ್ತಾರೆ ಎಂಬ ನಂಬಿಕೆಯಿದೆ ಎಂದು ಹೇಳಿದ್ದಾರೆ.
ಒಮರ್ ಅಬ್ದುಲ್ಲಾ ಅವರ ತಂದೆ ಫಾರೂಕ್ ಅಬ್ದುಲ್ಲಾ ನನ್ನ ಆಪ್ತ ಸ್ನೇಹಿತರಾಗಿದ್ದು, ಅವರಿಗೂ ಶುಭಕಾಮನೆಗಳು ಎಂದು ದೇವೇಗೌಡ ಉಲ್ಲೇಖಿಸಿದ್ದಾರೆ.
ಜಮ್ಮು-ಕಾಶ್ಮೀರಕ್ಕೆ ದೇವರು ಆಶೀರ್ವದಿಸಲಿ ನನ್ನ ಹೃದಯದಲ್ಲಿ ಬಹಳ ವಿಶೇಷವಾದ ಸ್ಥಾನವಿದೆ ಎಂದು ದೇವೇಗೌಡ ಉಲ್ಲೇಖಿಸಿದ್ದಾರೆ.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *