ನಾರಾಯಣಪುರ: ಬಸವಸಾಗರ ಜಲಾಶಯಕ್ಕೆ ಬುಧವಾರ ಆಲಮಟ್ಟಿ ಲಾಲ್ ಬಹದ್ದೂರ ಶಾಸ್ತ್ರಿ ಜಲಾಶಯದಿಂದ 50 ಸಾವಿರ ಕ್ಯುಸೆಕ್ ನೀರು ಬರುತ್ತಿದ್ದು ಬಸವ ಸಾಗರ ಜಲಾಶಯದ 13 ಗೇಟ್ ತೆರೆದು 58 ಸಾವಿರ ಕ್ಯುಸೆಕ್ ನೀರನ್ನು ಕೃಷ್ಣಾ ನದಿಗೆ ಹರಿಬಿಡಲಾಗಿದೆ.
ಪಶ್ಚಿಮಘಟ್ಟ ಜಲಾನಯನ ಪ್ರದೇಶದಲ್ಲಿ ಹೆಚ್ಚಿನ ಪ್ರಮಾಣದಲ್ಲಿ ಮಳೆ ಆಗುತ್ತಿರುವುದರಿಂದ ಬಸವ ಸಾಗರ ಜಲಾಶಯಕ್ಕೆ ಇಂದು 50 ಸಾವಿರ ಕ್ಯುಸೆಕ್ ನೀರು ಹರಿದು ಬರುತ್ತಿದೆ.
ಒಳಹರಿವನ್ನು ಗಮನಿಸಿ ಕೃಷ್ಣಾನದಿಗೆ ನೀರುಬಿಡಲಾಗುತ್ತಿದೆ ಜಲಾಶಯದ ಒಳಹರಿವಿನ ಪ್ರಮಾಣ ಗಮನಿಸಿ ಕೃಷ್ಣಾ ನದಿಗೆ ನೀರು ಹರಿಸುವ ಪ್ರಮಾಣವನ್ನು ಕಡಿಮೆಗೊಳಿಸಲಾಗುವುದು ಎಂದು ಕೆಬಿಜೆಎನ್‌ಎಲ್ ಮೂಲಗಳಿಂದ ತಿಳಿಸಿವೆ.
ಬುಧವಾರ 492.08 ಮೀಟರ್ ನೀರಿದ್ದು, 32.51 ಟಿಎಂಸಿ ಅಡಿಗಳಷ್ಟು ನೀರು ಸಂಗ್ರಹಗೊಂಡಿದೆ, ಒಳಹರಿವು 60 ಸಾವಿರ ಕ್ಯುಸೆಕ್ ಇದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

