Breaking News

ಕೊಪ್ಪಳದಲ್ಲಿ ಒಳ ಮೀಸಲಾತಿ ಜಾರಿಗೆ ಒತ್ತಾಯಿಸಿ ಜಿಲ್ಲಾಧಿಕಾರಿಗೆ ಮನವಿ

ಕೊಪ್ಪಳ: ಸುಪ್ರೀಂ ಕೋರ್ಟ್‌ನ ತೀರ್ಪಿನ ಪ್ರಕಾರ ರಾಜ್ಯ ಸರ್ಕಾರ ಒಳಮೀಸಲಾತಿ ಜಾರಿ ಮಾಡಬೇಕು ಎಂದು ಒತ್ತಾಯಿಸಿ ಪರಿಶಿಷ್ಟ ಜಾತಿಗಳ ಒಳಮೀಸಲಾತಿ ಜಾರಿ ಹೋರಾಟ ಸಮಿತಿಯ ಜಿಲ್ಲಾ ಒಕ್ಕೂಟದ ಪದಾಧಿಕಾರಿಗಳು ಇಲ್ಲಿನ ಜಿಲ್ಲಾಡಳಿತ ಭವನದ ಎದುರು ಪ್ರತಿಭಟನೆ ನಡೆಸಿದರು.
ಪರಿಶಿಷ್ಟ ಜಾತಿಗಳಲ್ಲಿ ಶೈಕ್ಷಣಿಕವಾಗಿ, ಸಾಮಾಜಿಕವಾಗಿ ಮತ್ತು ಆರ್ಥಿಕವಾಗಿ ಅತಿ ಹೆಚ್ಚು ಹಿಂದುಳಿದ ಜಾತಿಗಳ ಅಭಿವೃದ್ಧಿಯ ಉದ್ದೇಶದಿಂದಾಗಿ ಆಯಾ ಜಾತಿಗಳಿಗೆ ಸೇರಿದವರಿಗೆ ಮೀಸಲಾತಿ ಸೌಲಭ್ಯ ತಲುಪಲು ಒಳಮೀಸಲಾತಿ ನೀಡುವ ಸಾಂವಿಧಾನಿಕ ಅಧಿಕಾರ ಆಯಾ ರಾಜ್ಯಗಳಿಗೆ ಇದೆ ಎಂದು ಸುಪ್ರೀಂ ಕೋರ್ಟ್‌ ಸ್ಪಷ್ಟವಾಗಿ ಹೇಳಿದ್ದು, ರಾಜ್ಯ ಸರ್ಕಾರ ಇದನ್ನು ಅನುಷ್ಠಾನಕ್ಕೆ ತರಬೇಕು ಎಂದು ಆಗ್ರಹಿಸಿದರು.
ಪರಿಶಿಷ್ಟ ಜಾತಿಗಳು ಸಾಮಾಜಿಕವಾಗಿ ಏಕರೂಪಿಯಾಗಿಲ್ಲ ಎಂದು ಏಳು ಜನ ನ್ಯಾಯಮೂರ್ತಿಗಳನ್ನು ಒಳಗೊಂಡ ಸಂವಿಧಾನ ಪೀಠ ಹೇಳಿದೆ. ಅದರಂತೆ ರಾಜ್ಯ ಕಾಂಗ್ರೆಸ್‌ ಸರ್ಕಾರ ನಡೆದುಕೊಳ್ಳಬೇಕು ಹಿಂದಿನ ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ ತನ್ನ ಪ್ರಣಾಳಿಕೆಯಲ್ಲಿ ತನ್ನ ಆರನೇ ಗ್ಯಾರಂಟಿಯಾಗಿ ಒಳಮೀಸಲಾತಿ ಕಲ್ಪಿಸಿಕೊಡುವುದಾಗಿ ಹೇಳಿತ್ತು. ಈ ಮಾತು ಉಳಿಸಿಕೊಳ್ಳಬೇಕು. ಒಳ ಮೀಸಲಾತಿ ಜಾರಿಯಾಗುವ ತನಕ ಬ್ಯಾಕ್‌ಲಾಗ್‌ ಮತ್ತು ಇತರೆ ನೇಮಕಾರಿಗಳನ್ನು ರದ್ದುಪಡಿಸಬೇಕು ಎಂದು ಒತ್ತಾಯಿಸಿದರು.
ಹೋರಾಟ ನಿರತರು ಜಿಲ್ಲಾಡಳಿತ ಭವನದ ಗೇಟ್ ಬಳಿ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗೆ ಮನವಿ ಸ್ವೀಕರಿಸಲು ಸಜ್ಜಾಗಿದ್ದರು. ಹೆಚ್ಚುವರಿ ಜಿಲ್ಲಾಧಿಕಾರಿ ಸಿದ್ರಾಮೇಶ್ವರ ಮನವಿ ಸ್ವೀಕರಿಸಲು ಬಂದರೂ ಖುದ್ದು ಜಿಲ್ಲಾಧಿಕಾರಿಯೇ ಬರಬೇಕು ಎಂದು ಸಂಘಟನೆಯವರು ಪಟ್ಟು ಹಿಡಿದು ಜಿಲ್ಲಾಡಳಿತ ಭವನದ ಪ್ರವೇಶದ್ವಾರದ ಬಳಿ ಬಂದು ಪ್ರತಿಭಟಿಸಿದರು ಬಳಿಕ ಜಿಲ್ಲಾಧಿಕಾರಿ ನಲಿನ್ ಅತುಲ್‌ ಬಂದು ಮನವಿ ಸ್ವೀಕರಿಸಿದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *