ದಾವಣಗೆರೆ: ಜನನ ಮತ್ತು ಮರಣ ಪ್ರಮಾಣ ಪತ್ರಗಳ ವಿತರಣೆಗೆ ಕಾಲಮಿತಿಯನ್ನು ನಿಗದಿಪಡಿಸಿದ ಜಿಲ್ಲಾಧಿಕಾರಿ ಜಿ.ಎಂ.ಗಂಗಾಧರಸ್ವಾಮಿ, 21 ದಿನಗಳ ಒಳಗೆ ನೋಂದಣಿ ಪ್ರಕ್ರಿಯೆ ಪೂರ್ಣಗೊಳಿಸಿ ಪ್ರಮಾಣ ಪತ್ರ ನೀಡಬೇಕು ಎಂದು ಸೂಚನೆ ನೀಡಿದರು.
ಇಲ್ಲಿನ ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ನಡೆದ ಜಿಲ್ಲಾ ಮಟ್ಟದ ನಾಗರಿಕ ನೋಂದಣಿ ಪದ್ಧತಿಯ ಸಮನ್ವಯ ಸಮಿತಿ ಸಭೆಯ ಅಧ್ಯಕ್ಷತೆ ವಹಿಸಿ ಅವರು ಮಾತನಾಡಿದರು.
ನೋಂದಣಿ ಪ್ರಕ್ರಿಯೆಯಲ್ಲಿ ಕೆಲ ಲೋಪಗಳು ಕಂಡುಬಂದಿವೆ ಮರಣ ದಿನಾಂಕ ಹಾಗೂ ನೋಂದಣಿ ಘಟಕವನ್ನು ತಪ್ಪಾಗಿ ಆಯ್ಕೆ ಮಾಡಲಾಗುತ್ತಿದೆ. ಬೇರೆಯವರ ಆಧಾರ್ ಜೋಡಣೆ ಮಾಡಿ ಪ್ರಮಾಣ ಪತ್ರ ವಿತರಣೆ ಮಾಡಿದ ಪ್ರಕರಣಗಳು ಗೊತ್ತಾಗಿವೆ. ಇನ್ನು ಮುಂದೆ ಇಂತಹ ತಪ್ಪುಗಳು ಆಗದಂತೆ ಎಚ್ಚರವಹಿಸಬೇಕು ಜನನ ಹಾಗೂ ಮರಣ ನೋಂದಣಾಧಿಕಾರಿ ಮತ್ತು ಉಪನೋಂದಣಾಧಿಕಾರಿಗಳು ಸರಿಯಾಗಿ ಕಾರ್ಯನಿರ್ವಹಿಸಬೇಕು ಎಂದು ತಾಕೀತು ಮಾಡಿದರು.
ಜನವರಿಯಿಂದ ಸೆಪ್ಟೆಂಬರ್ ವರೆಗೆ ಜಿಲ್ಲೆಯಲ್ಲಿ 4,744 ಜನನ ಹಾಗೂ 4,985 ಮರಣ ನೋಂದಣಿಯಾಗಿವೆ ಎಂದು ಜಿಲ್ಲಾ ಸಂಖ್ಯಿಕ ಅಧಿಕಾರಿ ನೀಲಾ ಸಭೆಗೆ ಮಾಹಿತಿ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

