Breaking News

ಕೇಂದ್ರ ಸರ್ಕಾರದಿಂದ ಹಿಂಗಾರು ಬೆಳೆಗಳ ಬೆಂಬಲ ಬೆಲೆ ಹೆಚ್ಚಳ: ಕೇಂದ್ರ ಸಚಿವ ಪ್ರಲ್ಹಾದ ಜೋಶಿ

ನವದೆಹಲಿ: ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಕೇಂದ್ರ ಸರ್ಕಾರ ಸಕಾಲಿಕವಾಗಿ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಳ ಘೋಷಿಸಿ ರೈತರಿಗೆ ಬಲ ತುಂಬಿದೆ ಎಂದು ಕೇಂದ್ರ ಆಹಾರ ಮತ್ತು ನಾಗರಿಕ ಪೂರೈಕೆ ಸಚಿವ ಪ್ರಲ್ಹಾದ್‌ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಇಂದು ಮಾತನಾಡಿ, ಮುಂಗಾರು, ಹಿಂಗಾರು ಹಂಗಾಮಿನ ವಿವಿಧ ಬೆಳೆಗಳಿಗೆ ಬೆಂಬಲ ಬೆಲೆ ಹೆಚ್ಚಿಸುವ ಮೂಲಕ ಪ್ರಧಾನಿ ಮೋದಿ ಅವರು ಅನ್ನದಾತರಿಗೆ ಬೆಳಕು ತೋರಿದ್ದಾರೆ ಎಂದು ಬಣ್ಣಿಸಿದ್ದಾರೆ.
2025-26ಕ್ಕೆ ಹಿಂಗಾರು ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂ.ಎಸ್‌.ಪಿ) ಹೆಚ್ಚಳಕ್ಕೆ ಕೇಂದ್ರ ಸಚಿವ ಸಂಪುಟ ಅನುಮೋದನೆ ನೀಡಿದೆ ಎಂದು ತಿಳಿಸಿದ್ದಾರೆ.
ಪ್ರಧಾನಿ ನರೇಂದ್ರ ಮೋದಿ ಅವರ ಅಧ್ಯಕ್ಷತೆಯಲ್ಲಿ ಆರ್ಥಿಕ ವ್ಯವಹಾರಗಳಿಗೆ ಸಂಬಂಧಿಸಿದ ಮಂತ್ರಿಮಂಡಲ ಸಮಿತಿ (ಸಿಸಿಇಎ) ವ್ಯಾಪಾರ ವರ್ಷ 2025-26ಕ್ಕಾಗಿ ಸೂಚಿಸಿದ ಎಲ್ಲಾ ಬೆಳೆಗಳಿಗೆ ಕನಿಷ್ಟ ಬೆಂಬಲ ಬೆಲೆ (ಎಂ.ಎಸ್.ಪಿ) ಹೆಚ್ಚಿಸಲು ಅನುಮೋದನೆ ನೀಡಿದೆ ಎಂದು ಜೋಶಿ ಹೇಳಿದ್ದಾರೆ.
ಎಂ.ಎಸ್‌.ಪಿಯಲ್ಲಿ ಗರಿಷ್ಠ ಹೆಚ್ಚಳವಾಗಿ ಸಾಸಿವೆಗೆ ಪ್ರತಿ ಕ್ವಿಂಟಲ್‌ಗೆ 300 ರೂ. ಹಾಗೂ ಮಸೂರ ಬೇಳೆಗೆ ಪ್ರತಿ ಕ್ವಿಂಟಲ್‌ಗೆ 275 ರೂ.ಗೆ ಏರಿದೆ. ಕಡಲೆ, ಗೋಧಿ, ಕುಸುಬೆ ಮತ್ತು ಬಾರ್ಲಿ ಧಾನ್ಯಗಳಿಗೆ ಪ್ರತಿ ಕ್ವಿಂಟಲ್‌ಗೆ ಅನುಕ್ರಮವಾಗಿ 210 ರೂ., 150 ರೂ., 140 ರೂ. ಮತ್ತು 130 ರೂಪಾಯಿ ಹೆಚ್ಚಿಸಲಾಗಿದೆ ಎಂದು ಸಚಿವರು ವಿವರಿಸಿದ್ದಾರೆ.
2025-26 ರ ಹಿಂಗಾರು ಬೆಳೆಗಳಿಗಾಗಿ ಎಂ.ಎಸ್‌.ಪಿಯಲ್ಲಿ ಮಾಡಲಾದ ಹೆಚ್ಚಳ 2018-19 ರ ಕೇಂದ್ರ ಬಜೆಟ್‌ನಲ್ಲಿ ಎಂ.ಎಸ್‌.ಪಿಯನ್ನು ಅಖಿಲ ಭಾರತೀಯ ನಿವ್ವಳ ಸರಾಸರಿ ಉತ್ಪಾದನಾ ವೆಚ್ಚದ ಕನಿಷ್ಟ 1.5 ಪಟ್ಟು ಹೆಚ್ಚು ನಿಗದಿಪಡಿಸಿದೆ ಗೋಧಿಗೆ ಶೇ.105, ಸಾಸಿವೆಗೆ ಶೇ.98; ಮಸೂರ ಬೇಳೆಗೆ ಶೇ.89, ಕಡಲೆಗೆ ಶೇ.60; ಬಾರ್ಲಿಗೆ ಶೇ.60, ಕುಸುಬೆಗೆ ಶೇ.50 ರಷ್ಟಿದೆ. ಹಿಂಗಾರು ಬೆಳೆಗಳ ಎಂ.ಎಸ್‌.ಪಿಯಲ್ಲಿ ಮಾಡಲಾದ ಈ ಹೆಚ್ಚಳದಿಂದ ನಿಶ್ಚಿತವಾಗಿ ರೈತರಿಗೆ ಲಾಭ ಸಿಗಲಿದೆ ಎಂದು ಸಚಿವ ಪ್ರಲ್ಹಾದ್‌ ಜೋಶಿ ತಿಳಿಸಿದ್ದಾರೆ.

Share News

About BigTv News

Check Also

ಅಡುಗೆ ಮಾಡುವುದನ್ನ ಕಲಿಬೇಕಮ್ಮ: ಅತ್ತೆ ಬುದ್ಧಿ ಹೇಳಿದ್ದಕ್ಕೆ 18 ವರ್ಷದ ಯುವತಿ ಆತ್ಮಹತ್ಯೆ!

ಚಿಕ್ಕಬಳ್ಳಾಪುರ: ಇತ್ತೀಚಿನ ದಿನಗಳಲ್ಲಿ ಯುವಕ- ಯುವತಿಯರಿಗೆ ಬುದ್ಧಿವಾದ ಹೇಳುವಂತಿಲ್ಲ. ವಾರದ ಹಿಂದೆಯಷ್ಟೇ ಮೊಬೈಲ್​ ನೋಡಬೇಡ ಎಂದು ಹೇಳಿದಕ್ಕೆ ಕೋಪಗೊಂಡು ಯುವತಿಯೊಬ್ಬಳು …

Leave a Reply

Your email address will not be published. Required fields are marked *