ಧಾರವಾಡ : ಪರಿಶಿಷ್ಟ ಜಾತಿ ಹಾಗೂ ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಎಂದು ಆಗ್ರಹಿಸಿ ಮಾದಿಗ ಸಮುದಾಯದ ಜನ ಧಾರವಾಡದಲ್ಲಿ ಬೃಹತ್ ಹೋರಾಟ ನಡೆಸಿದರು.
ಧಾರವಾಡದ ಕಲಾಭವನದಲ್ಲಿ ಜಮಾಯಿಸಿದ ಸಾವಿರಾರು ಜನ, ಅಲ್ಲಿಂದ ಜಿಲ್ಲಾಧಿಕಾರಿ ಕಚೇರಿವರೆಗೂ ಬೃಹತ್ ಪ್ರತಿಭಟನಾ ರ್ಯಾಲಿ ನಡೆಸಿದರು.
ರಾಜ್ಯ ಕಾಂಗ್ರೆಸ್ ಸರ್ಕಾರ ತನ್ನ ಚುನಾವಣಾ ಪ್ರಣಾಳಿಕೆಯಲ್ಲಿ ಒಳ ಮೀಸಲಾತಿ ಕಲ್ಪಿಸುವುದಾಗಿ ಹೇಳಿತ್ತು. ಕಾಂಗ್ರೆಸ್ ಅಧಿಕಾರಕ್ಕೆ ಬಂದು ಎರಡು ವರ್ಷ ಆಗುತ್ತ ಬಂದಿದ್ದರೂ ಈ ಒಳ ಮೀಸಲಾತಿ ಬಗ್ಗೆ ಚಕಾರವೆತ್ತುತ್ತಿಲ್ಲ ಎಂದು ರಾಜ್ಯ ಕಾಂಗ್ರೆಸ್ ಸರ್ಕಾರದ ವಿರುದ್ಧ ಘೋಷಣೆ ಕೂಗಿದರು.
ರಾಜ್ಯ ಸರ್ಕಾರ ಕೂಡಲೇ ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡಕ್ಕೆ ಒಳ ಮೀಸಲಾತಿ ನೀಡಬೇಕು ಇಲ್ಲದೇ ಹೋದರೆ ಮುಂದಿನ ದಿನಗಳಲ್ಲಿ ಇನ್ನೂ ದೊಡ್ಡಮಟ್ಟದ ಹೋರಾಟಕ್ಕೆ ಮುಂದಾಗಬೇಕಾಗುತ್ತದೆ ಎಂದು ಪ್ರತಿಭಟನಾಕಾರರು ಎಚ್ಚರಿಕೆ ನೀಡಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

