Breaking News

ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತದ ಆತಂಕ: ಗ್ರಾಮಸ್ಥರ ಸ್ಥಳಾಂತರಕ್ಕೆ ಸೂಚನೆ

ಚಿಕ್ಕಮಗಳೂರು: ಈ ಭಾಗದ 5 ಗ್ರಾಮಗಳು ಭೌಗೋಳಿಕವಾಗಿ ಅಪಾಯ ಸ್ಥಿತಿಯಲ್ಲಿದ್ದು, ಅಲ್ಲಿನ ಕುಟುಂಬಗಳನ್ನು ಸ್ಥಳಾಂತರಿಸುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ಸೂಚನೆ ನೀಡಿದೆ.
ಚಿಕ್ಕಮಗಳೂರಿನ ಐದು ಗ್ರಾಮಗಳಲ್ಲಿ ಭೂಕುಸಿತವಾಗುವ ಸಾಧ್ಯತೆ ಇದೆ ಎಂದು ಜಿಯೋಲಾಜಿಕಲ್ ವಿಜ್ಞಾನಿಗಳ ತಂಡ ಮುನ್ನೆಚ್ಚರಿಕೆ ನೀಡಿದೆ.
ಮುಂದಿನ ಮಳೆಗಾಲದೊಳಗೆ ಈ ಗ್ರಾಮಗಳ ಜನರನ್ನು ಸ್ಥಳಾಂತರಿಸುವಂತೆ ಸೂಚನೆ ನೀಡಲಾಗಿದೆ.
ಚಿಕ್ಕಮಗಳೂರಿನ ಕೊಪ್ಪ ತಾಲೂಕಿನ ಗುಡ್ಡೆತೋಟ, ಬಸರಿಕಟ್ಟೆ, ಶೃಂಗೇರಿ ತಾಲೂಕಿನ ಕೆರೆದಂಡೆ, ಕಳಾ ತಾಲೂಕಿನ ಸೋಮನಕಟ್ಟೆ, ಚನ್ನಹಡ್ಲು ಗ್ರಾಮಗಳಲ್ಲಿ ಭೂಕುಸಿತ ಸಂಭವವಿದ್ದು, ಅಪಾಯದ ಸ್ಥಿತಿಯಲ್ಲಿವೆ. ಈ ಹಿನ್ನೆಲೆಯಲ್ಲಿ ಅಲ್ಲಿನ ಜನರನ್ನು ಸ್ಥಳಾಂತರ ಮಾಡುವಂತೆ ಜಿಯೋಲಾಜಿಕಲ್ ಸರ್ವೆ ಆಫ್ ಇಂಡಿಯಾ ವಿಜ್ಞಾನಿಗಳು ಜಿಲ್ಲಾಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ.
ತಜ್ಞರ ಸೂಚನೆಯಂತೆ ಜಿಲ್ಲಾಧಿಕಾರಿ ಮೀನಾ ನಾಗರಾಜ್, ಆಯಾ ತಾಲೂಕು ಅಧಿಕಾರಿಗಳಿಗೆ ಗ್ರಾಮಗಳ ಜನರನ್ನು ಸ್ಥಳಾಂತರ ಮಾಡುವಂತೆ ಸೂಚಿಸಿದ್ದಾರೆ. ಪರ್ಯಾಯ ವ್ಯವಸ್ಥೆ ಬಗ್ಗೆಯೂ ಚರ್ಚೆ ನಡೆಯುತ್ತಿದೆ.

Share News

About BigTv News

Check Also

ದೇರಳಕಟ್ಟೆ: ಮೆಡಿಕಲ್‌ ಕಾಲೇಜಿನಲ್ಲಿ Ragging ಪ್ರಕರಣ ದಾಖಲು

ಮಂಗಳೂರು: ದೇರಳಕಟ್ಟೆಯ ಮೆಡಿಕಲ್ ಕಾಲೇಜೊಂದರಲ್ಲಿ ಕಿರಿಯ ವಿದ್ಯಾರ್ಥಿಗಳಿಗೆ ಹಿರಿಯ ವಿದ್ಯಾರ್ಥಿಗಳು ರಾಗಿಂಗ್ ನಡೆಸಿ ಜೀವ ಬೆದರಿಕೆ ಹಾಕಿರುವ ಆರೋಪದಡಿ ಉಳ್ಳಾಲ …

Leave a Reply

Your email address will not be published. Required fields are marked *