Breaking News

ಜಮ್ಮು ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರ ಒಮರ್ ಅಬ್ದುಲ್ಲಾ ಜತೆಗೂಡಿ ಕೆಲಸ ನಿರ್ವಹಿಸಲಿದೆ: ಪ್ರಧಾನಿ ಮೋದಿ

ನವದೆಹಲಿ: ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿರುವ ಒಮರ್ ಅಬ್ದುಲ್ಲಾ ಅವರಿಗೆ ಪ್ರಧಾನಿ ನರೇಂದ್ರ ಮೋದಿ ಅಭಿನಂದನೆಗಳನ್ನು ಸಲ್ಲಿಸಿದ್ದಾರೆ.
ಅಲ್ಲದೆ ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಕೇಂದ್ರ ಸರ್ಕಾರವು ರಾಜ್ಯ ಸರ್ಕಾರದೊಂದಿಗೆ ಜತೆಗೂಡಿ ಕೆಲಸ ಮಾಡಲಿದೆ ಎಂದು ಭರವಸೆ ನೀಡಿದ್ದಾರೆ.
ಈ ಕುರಿತು ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪ್ರಧಾನಿ ಮೋದಿ ಪೋಸ್ಟ್ ಮಾಡಿದ್ದಾರೆ.
ಜಮ್ಮು-ಕಾಶ್ಮೀರದ ಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ ಒಮರ್ ಅಬ್ದುಲ್ಲಾ ಅವರಿಗೆ ಅಭಿನಂದನೆಗಳು. ಜನರ ಸೇವೆ ಮಾಡುವ ಅವರ ಪ್ರಯತ್ನಕ್ಕೆ ಶುಭ ಹಾರೈಕೆಗಳು. ಜಮ್ಮು-ಕಾಶ್ಮೀರದ ಪ್ರಗತಿಗಾಗಿ ಒಮರ್ ಮತ್ತು ಅವರ ತಂಡದೊಂದಿಗೆ ಜತೆಗೂಡಿ ಕೇಂದ್ರ ಸರ್ಕಾರವು ನಿಕಟವಾಗಿ ಕಾರ್ಯ ನಿರ್ವಹಿಸಲಿದೆ ಎಂದು ಹೇಳಿದ್ದಾರೆ.
2019ರಲ್ಲಿ ಕೇಂದ್ರ ಸರ್ಕಾರ ಸಂವಿಧಾನದ 370ನೇ ವಿಧಿ ರದ್ದುಗೊಳಿಸಿದ ಬಳಿಕ ಜಮ್ಮು-ಕಾಶ್ಮೀರದಲ್ಲಿ ಮೊದಲ ಚುನಾಯಿತ ಸರ್ಕಾರ ರಚನೆಗೊಂಡಿದೆ.

Share News

About BigTv News

Check Also

ಅತ್ಯಾಚಾರ ಎಸೆಗಿದವರ ಮೇಲೆ‌ ಪ್ರತೀಕಾರ – ಅಪಹರಣ ಮಾಡಿ ಸಿಕ್ಕಿಬಿದ್ದ ಆರೋಪಿಗಳು!

ಬೆಂಗಳೂರು: ಮಾರತ್ತಹಳ್ಳಿಯಲ್ಲಿ ಸ್ನೇಹಿತನ ಪ್ರೇಯಸಿಯನ್ನು ಕಾಲ್‌ಗರ್ಲ್ ಎಂದು ತಪ್ಪಾಗಿ ಭಾವಿಸಿ ಅತ್ಯಾಚಾರ ಎಸಗಿದ ಆರೋಪದ ಹಿನ್ನೆಲೆಯಲ್ಲಿ, ಪ್ರತೀಕಾರಕ್ಕಾಗಿ ಇಬ್ಬರನ್ನು ಅಪಹರಿಸಿ …

Leave a Reply

Your email address will not be published. Required fields are marked *