ನವಲಗುಂದ: ಸ್ಥಳೀಯ ಸರಕಾರಿ ಪ್ರಥಮ ದರ್ಜೆ ಕಾಲೇಜಿನಲ್ಲಿ ಆಯೋಜಿಸಲಾಗಿದ್ದ ಆದಿಕವಿ ಮಹರ್ಷಿ ವಾಲ್ಮೀಕಿ ಜಯಂತಿ ಆಚರಣೆಯ ಮುಖ್ಯ ಅತಿಥಿಗಳಾಗಿ ಭಾಗವಹಿಸಿದ್ದ ಸಮಾಜಶಾಸ್ತ್ರ ವಿಭಾಗದ ಮುಖ್ಯಸ್ಥರಾದ ಡಾ.ಸಂತೋಷ ಹುಬ್ಬಳ್ಳಿ ರವರು ವಾಲ್ಮೀಕಿಯವರಿಂದ ರಚನೆಯಾದ ಮಹಾಕಾವ್ಯ ರಾಮಾಯಣವು ಇಂದಿನ ಜಗತ್ತಿನಲ್ಲಿ ಸತ್ವವುಳ್ಳ ಹಾಗೂ ಮೌಲ್ಯಯುತವಾದ ಕಾವ್ಯವಾಗಿದ್ದು ಶ್ರೇಷ್ಠ ಸಾಹಿತ್ಯದ ಸೃಷ್ಟಿಗೆ ಕಾರಣವಾಗಿದೆ ಎಂದು ಹೇಳಿದರು.
ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದ ಪ್ರಾಂಶುಪಾಲರಾದ ಡಾ.ಎಂ.ಬಿ.ಬಾಗಡಿ ವಾಲ್ಮೀಕಿಯು ಕವಿಕುಲದ ಗುರುವಾಗಿ ಹಲವಾರು ಕವಿಗಳಿಗೆ ಮತ್ತು ಸಾಹಿತಿಗಳಿಗೆ ಸ್ಫೂರ್ತಿಯ ಸೆಲೆಯಾಗಿದ್ದು, ವಿದ್ಯಾರ್ಥಿಗಳಿಗೆ ಹಾಗೂ ಅವರಲ್ಲಿರುವ ಸಾಹಿತ್ಯದ ಕೃಷಿಗೆ ವಾಲ್ಮೀಕಿಯವರ ರಾಮಾಯಣವು ಉತ್ತಮ ಗ್ರಂಥವಾಗಿ ನಿಲ್ಲಬಲ್ಲದು ಎಂದು ಹೇಳಿದರು.
ಕಾರ್ಯಕ್ರಮದಲ್ಲಿ ಎಲ್ಲ ವಿದ್ಯಾರ್ಥಿಗಳು, ಸಿಬ್ಬಂದಿ ವರ್ಗದವರು ಮಹರ್ಷಿ ವಾಲ್ಮೀಕಿಯವರ ಭಾವಚಿತ್ರಕ್ಕೆ ಪೂಜೆಯನ್ನು ಸಲ್ಲಿಸಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

