Breaking News

ಬೆಳಗಾವಿ ನವಿಲುತೀರ್ಥ ಅಣೆಕಟ್ಟು ಸಂಪೂರ್ಣ ಭರ್ತಿ: ಕೃಷಿ ಚಟುವಟಿಕೆಗಳಿಗೆ ನೀರು, ರೈತರ ಮೊಗದಲ್ಲಿ ಸಂತಸ

ಬೆಳಗಾವಿ: ಈ ವರ್ಷ ಮುಂಗಾರು ಮಳೆ ಉತ್ತಮವಾಗಿ ಸುರಿದಿದ್ದು, ರಾಜ್ಯದ ಎಲ್ಲಾ ಡ್ಯಾಂಗಳು ಭರ್ತಿಯಾಗಿವೆ. ಬೆಳಗಾವಿಯಲ್ಲಿರುವ ನವಿಲುತೀರ್ಥ ಅಣೆಕಟ್ಟು ಭರ್ತಿಯಾಗಿದ್ದು, ಜಲಾಶಯದಿಂದ ಕುಡಿಯುವ ನೀರು, ಕೃಷಿ ಚಟುವಟಿಕೆಗಳಿಗೆ ನೀರು ಲಭ್ಯವಾಗಲಿದೆ. ಆದ್ದರಿಂದ ರೈತರು ಸಂತಸಗೊಂಡಿದ್ದಾರೆ.
ಮಲಪ್ರಭಾ ನದಿಗೆ ಅಡ್ಡಲಾಗಿ ನಿರ್ಮಾಣ ಮಾಡಿರುವ ಜಲಾಶಯಕ್ಕೆ ಗಂಗೆ ಪೂಜೆ ಮಾಡಿ, ಬಾಗಿನ ಅರ್ಪಿಸಲಾಗಿದೆ.
ಮಲಪ್ರಭಾ ನೀರಾವರಿ ಸಲಹಾ ಸಮಿತಿ ನವಿಲುತೀರ್ಥ ಡ್ಯಾಂನಲ್ಲಿ ಗಂಗೆ ಪೂಜೆ, ಬಾಗಿನ ಅರ್ಪಣೆ ಕಾರ್ಯಕ್ರಮ ಆಯೋಜಿಸಿತ್ತು. ಮಹಿಳಾ ಮತ್ತು ಮಕ್ಕಳ ಅಭಿವೃದ್ಧಿ ಇಲಾಖೆ ಸಚಿವೆ ಹಾಗೂ ಮಲಪ್ರಭಾ ನೀರಾವರಿ ಸಲಹಾ ಸಮಿತಿಯ ಅಧ್ಯಕ್ಷೆ ಲಕ್ಷ್ಮೀ ಹೆಬ್ಬಾಳ್ಕರ್‌ ಗಂಗೆ ಪೂಜೆ ಮಾಡಿ, ಡ್ಯಾಂಗೆ ಬಾಗಿನ ಅರ್ಪಿಸಿದರು.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *