Breaking News

ಸಂಡೂರು ವಿಧಾನಸಭಾ ಕ್ಷೇತ್ರದ ಉಪಚುನಾವಣೆ: ನೀತಿ ಸಂಹಿತೆ ಜಾರಿ

ಬಳ್ಳಾರಿ: ಕೇಂದ್ರ ಚುನಾವಣಾ ಆಯೋಗ ಕರ್ನಾಟಕದ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭೆ ಕ್ಷೇತ್ರದ ಉಪಚುನಾವಣೆ-2024ರ ದಿನಾಂಕ ಘೋಷಣೆ ಮಾಡಿದ್ದು, ಸಂಡೂರು ವಿಧಾನಸಭಾ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದೆ. ನವೆಂಬರ್ 13ರಂದು ಮತದಾನ ಮತ್ತು ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ.
ಬಳ್ಳಾರಿ ಜಿಲ್ಲಾಡಳಿತ ಉಪ ಚುನಾವಣೆಯ ಕುರಿತು ಮಾಹಿತಿಯನ್ನು ನೀಡಿದೆ.
ಬಳ್ಳಾರಿ ಜಿಲ್ಲಾಧಿಕಾರಿ, ಜಿಲ್ಲಾ ಚುನಾವಣಾಧಿಕಾರಿ ಪ್ರಶಾಂತ್ ಕುಮಾರ್ ಮಿಶ್ರಾ ಸಂಡೂರು ಉಪ ಚುನಾವಣೆ ಕುರಿತು ಮಾಹಿತಿ ನೀಡಿದರು. ಈ ಸಂದರ್ಭದಲ್ಲಿ ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಡಾ. ಶೋಭರಾಣಿ, ಜಿಲ್ಲಾ ಸ್ವೀಪ್ ಸಮಿತಿಯ ನೋಡೆಲ್ ಅಧಿಕಾರಿ ಹಾಗೂ ಜಿಪಂ ಸಿಇಒ ರಾಹುಲ್ ಶರಣಪ್ಪ ಸಂಕನೂರ, ಅಪರ ಜಿಲ್ಲಾಧಿಕಾರಿ ಮಹಮ್ಮದ್ ಝುಬೇರ್, ಸಹಾಯಕ ಆಯುಕ್ತ ಪ್ರಮೋದ್ ಸೇರಿದಂತೆ ಹಲವು ಅಧಿಕಾರಿಗಳು ಉಪಸ್ಥಿತರಿದ್ದರು.
ಸಂಡೂರು ವಿಧಾನಸಭೆ ವ್ಯಾಪ್ತಿಯಲ್ಲಿ ತಕ್ಷಣದಿಂದಲೇ ಮಾದರಿ ನೀತಿ ಸಂಹಿತೆ ಜಾರಿಯಾಗಿದ್ದು, ನವೆಂಬರ್ 13ರಂದು ಮತದಾನ ನಡೆಯಲಿದೆ ನವೆಂಬರ್ 23ರಂದು ಮತಎಣಿಕೆ ನಡೆಯಲಿದೆ. ಪಾರದರ್ಶಕ ಹಾಗೂ ನ್ಯಾಯಸಮ್ಮತವಾಗಿ ಚುನಾವಣೆ ನಡೆಸಲು ಜಿಲ್ಲಾಡಳಿತ ಅಗತ್ಯ ಸಿದ್ಧತೆ ಮಾಡಿಕೊಂಡಿದೆ ಎಂದು ಪ್ರಶಾಂತ್ ಕುಮಾರ್ ಮಿಶ್ರಾ ಹೇಳಿದರು.

Share News

About BigTv News

Check Also

ಯುವತಿ ಕುತ್ತಿಗೆಗೆ ಚಾಕು ಇಟ್ಟು ಸರ ದರೋಡೆ ಯತ್ನ: ಕಿಡಿಗೇಡಿ ಬಂಧನ

ಬೆಂಗಳೂರು: ಇಂದಿರಾನಗರದ ಅಂಗಡಿಯೊಂದಕ್ಕೆ ನುಗ್ಗಿ ಯುವತಿಯ ಕುತ್ತಿಗೆಗೆ ಚಾಕು ಇಟ್ಟು ಚಿನ್ನದ ಸರ ದರೋಡೆಗೆ ಯತ್ನಿಸಿದ ಪ್ರಭುರಾಜ್ (40) ಎಂಬಾತನನ್ನು …

Leave a Reply

Your email address will not be published. Required fields are marked *