Breaking News

ದಾವಣಗೆರೆ ಜಿಲ್ಲೆಯ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು 44 ಗ್ರಾಮಗಳ ಆಯ್ಕೆ: ಡಾ.ಪ್ರಭಾ ಮಲ್ಲಿಕಾರ್ಜುನ

ದಾವಣಗೆರೆ: ಪ್ರಧಾನ ಮಂತ್ರಿ ಜನಜಾತಿಯ ಉನ್ನತ ಗ್ರಾಮ ಯೋಜನೆಯಲ್ಲಿ ವಿವಿಧ ಕ್ಷೇತ್ರಗಳಲ್ಲಿ ಮೂಲಭೂತ ಸೌಕರ್ಯ ಒದಗಿಸಲು ಜಿಲ್ಲೆಯ 44 ಗ್ರಾಮಗಳನ್ನು ಆಯ್ಕೆ ಮಾಡಲಾಗಿದೆ ಈ ಗ್ರಾಮಗಳಲ್ಲಿನ ಅಭಿವೃದ್ದಿ ಕಾಮಗಾರಿಗಳು ನಡೆಯಬೇಕಿದೆ ಎಂದು ಸಂಸದೆ ಡಾ.ಪ್ರಭಾ ಮಲ್ಲಿಕಾರ್ಜುನ್ ಅವರು ತಿಳಿಸಿದರು.
ಅವರು ಜಿಲ್ಲಾಡಳಿತ ,ಜಿಲ್ಲಾ ಪಂಚಾಯತ್ ,ಪರಿಶಿಷ್ಟ ವರ್ಗಗಳ ಕಲ್ಯಾಣ ಇಲಾಖೆ, ಕನ್ನಡ ಮತ್ತು ಸಂಸ್ಕೃತಿ ಇಲಾಖೆ, ಮಹಾನಗರ ಪಾಲಿಕೆ ಹಾಗೂ ಕರ್ನಾಟಕ ಮಹರ್ಷಿ ವಾಲ್ಮೀಕಿ ಪರಿಶಿಷ್ಟ ಪಂಗಡಗಳ ಅಭಿವೃದ್ಧಿ ನಿಗಮದ ಸಂಯುಕ್ತಾಶ್ರಯದಲ್ಲಿ ಗುಂಡಿ ಮಹಾದೇವಪ್ಪ ಕಲ್ಯಾಣ ಮಂಟಪದಲ್ಲಿ ಇಂದು ಆಯೋಜಿಸಲಾಗಿದ್ದ ಶ್ರೀ ಮಹರ್ಷಿ ವಾಲ್ಮೀಕಿ ಜಯಂತಿ ಕಾರ್ಯಕ್ರಮ ಉದ್ಘಾಟಿಸಿ ಮಾತನಾಡಿದರು.
ಗ್ರಾಮೀಣ ಭಾಗದಲ್ಲಿ ಶ್ರೀ ಮಹರ್ಷಿ ವಾಲ್ಮೀಕಿ ಭವನದ ನಿರ್ಮಾಣಕ್ಕೆ ರೂ. 20 ಲಕ್ಷ, ಹೋಬಳಿ ಮತ್ತು ಪಟ್ಟಣ ಪಂಚಾಯಿತಿ ಮಟ್ಟದಲ್ಲಿ 75 ಲಕ್ಷ ,ತಾಲೂಕು ಮಟ್ಟದಲ್ಲಿ 200 ಲಕ್ಷ ಮತ್ತು ಜಿಲ್ಲಾ ಮಟ್ಟದಲ್ಲಿ ಭವನ ನಿರ್ಮಾಣ ಮಾಡಲು ರೂ. 400 ಲಕ್ಷ ನಿಗದಿ ಮಾಡಲಾಗಿದೆ ಎಂದು ತಿಳಿಸಿದರು.
ಪ್ರಧಾನ ಮಂತ್ರಿ ಆದಿ ಆದರ್ಶ ಗ್ರಾಮ ಯೋಜನೆಯಡಿಯಲ್ಲಿ ಪ್ರಥಮ ಹಂತದಲ್ಲಿ 7 ಗ್ರಾಮಗಳಲ್ಲಿ ಮೂಲಭೂತ ಸೌಕರ್ಯ ಕಲ್ಪಿಸಲು ಹಾಗೂ ಎಲ್ಲಾ ತರಹದ ಅಭಿವೃದ್ದಿ ಕಾಮಗಾರಿಗಳನ್ನು ಇಲ್ಲಿ ಅನುಷ್ಠಾನಗೊಳಿಸಲಾಗುವುದು ಎಂದು ಹೇಳಿದರು.

Share News

About BigTv News

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *