Breaking News

ಹರಿಯಾಣ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕಾರ

ಚಂಡೀಗಢ : ಹರಿಯಾಣದ ಮುಖ್ಯಮಂತ್ರಿಯಾಗಿ ನಯಾಬ್ ಸಿಂಗ್ ಸೈನಿ ಇಂದು ಪ್ರಮಾಣ ವಚನ ಸ್ವೀಕರಿಸಿದರು.
ಇತ್ತೀಚೆಗೆ ನಡೆದ ವಿಧಾನಸಭಾ ಚುನಾವಣೆಯಲ್ಲಿ ಬಿಜೆಪಿ ಜಯಭೇರಿ ಬಾರಿಸಿದ್ದು, 90 ವಿಧಾನಸಭಾ ಸ್ಥಾನಗಳ ಪೈಕಿ ಬಿಜೆಪಿ 48 ಸ್ಥಾನಗಳನ್ನು ಗೆದ್ದಿದೆ.
ರಾಜ್ಯಪಾಲ ಬಂಡಾರು ದತ್ತಾತ್ರೇಯ ಅವರು ನಾಯಬ್ ಸಿಂಗ್ ಅವರಿಗೆ ಪ್ರಮಾಣ ವಚನ ಬೋಧಿಸಿದರು. ಕಾರ್ಯಕ್ರಮದಲ್ಲಿ ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್ ಶಾ, ರಕ್ಷಣಾ ಸಚಿವ ರಾಜನಾಥ್ ಸಿಂಗ್, ಕೇಂದ್ರ ಸಚಿವ ಚಿರಾಗ್ ಪಾಸ್ವಾನ್, ಯುಪಿ ಸಿಎಂ ಯೋಗಿ ಆದಿತ್ಯನಾಥ್ ಮತ್ತಿತರರು ಉಪಸ್ಥಿತರಿದ್ದರು.
ಮುಖ್ಯಮಂತ್ರಿಯವರ ಜೊತೆಗೆ ಅನಿಲ್ ವಿಜ್, ಕ್ರಿಶನ್ ಲಾಲ್ ಪನ್ವಾರ್, ರಾವ್ ನರಬೀರ್ ಸಿಂಗ್, ಮಹಿಪಾಲ್ ಧಂಡಾ, ವಿಪುಲ್ ಗೋಯೆಲ್, ಅರವಿಂದ್ ಕುಮಾರ್ ಶರ್ಮಾ ಮತ್ತು ಶ್ಯಾಮ್ ಸಿಂಗ್ ರಾಣಾ ಸೇರಿ 14 ಮಂದಿ ಸಚಿವರಾಗಿ ಪ್ರಮಾಣ ವಚನ ಸ್ವೀಕರಿಸಿದರು.
ಸಮಾರಂಭದ ಬಳಿಕ ಪ್ರಧಾನಿ ಮೋದಿ ನೇತೃತ್ವದಲ್ಲಿ ಪಂಚಕುಲದಲ್ಲಿ ಎನ್‌ಡಿಎ ಸಾಮಾನ್ಯ ಸಭೆ ನಡೆಯಿತು.

Share News

About BigTv News

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *