Breaking News

ದಾವಣಗೆರೆಯಲ್ಲಿ ಭೀಕರ ರಸ್ತೆ ಅಪಘಾತ: ಇಬ್ಬರು ಯುವಕರು ದುರ್ಮರಣ

ದಾವಣಗೆರೆ : ಇಂದು ಭೀಕರ ರಸ್ತೆ ಅಪಘಾತ ಸಂಭವಿಸಿದ್ದು, ಟಿಪ್ಪರ್ ಹಾಗೂ ಬೈಕ್ ನಡುವೆ ಅಪಘಾತ ಸಂಭವಿಸಿದ್ದರಿಂದ ಸ್ಥಳದಲ್ಲೇ ಇಬ್ಬರು ಯುವಕರು ದಾರುಣವಾಗಿ ಸಾವನ್ನಪ್ಪಿರುವ ಘಟನೆ ದಾವಣಗೆರೆ ಜಿಲ್ಲೆಯ ಚೆನ್ನಗಿರಿ ತಾಲೂಕಿನ ಹಾಲೇಶಪುರದ ಬಳಿ ಅಪಘಾತ ಸಂಭವಿಸಿದೆ.
ಇನ್ನು ಈ ಒಂದು ಭೀಕರ ಅಪಘಾತದಲ್ಲಿ ಮೃತಪಟ್ಟ ಯುವಕರ ಗುರುತು ಇನ್ನು ಪತ್ತೆಯಾಗಿಲ್ಲ. ಮೃತದೇಹಗಳನ್ನು ಚನ್ನಗಿರಿ ತಾಲ್ಲೂಕು ಆಸ್ಪತ್ರೆಗೆ ರವಾನೆ ಮಾಡಲಾಗಿದೆ. ಈ ಕುರಿತಂತೆ ಪೊಲೀಸರು ತನಿಖೆಯನ್ನು ಆರಂಭಿಸಿದ್ದಾರೆ. ಅಪಘಾತದ ಘಟನೆ ಕುರಿತಂತೆ ಚೆನ್ನಗಿರಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Share News

About BigTv News

Check Also

ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ ಸಲ್ಮಾನ್ ಖಾನ್ ಸಿಸಿಬಿ ಬಲೆಗೆ!

ಬೆಂಗಳೂರು: ಸಾಮಾಜಿಕ ಜಾಲತಾಣದಲ್ಲಿ ಮಾರಕಾಸ್ತ್ರ ಹಿಡಿದು ರೀಲ್ಸ್ ಮಾಡಿದ್ದ ಆರೋಪದ ಮೇಲೆ ಸಲ್ಮಾನ್ ಖಾನ್ ಎಂಬಾತನನ್ನು ಸಿಸಿಬಿ ಪೊಲೀಸರು ಬಂಧಿಸಿದ್ದಾರೆ. …

Leave a Reply

Your email address will not be published. Required fields are marked *