ಕಲಬುರಗಿ: ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿ ವತಿಯಿಂದ ನಾಳೆ (ಅ.18 ರಂದು) ಬೆಳಗ್ಗೆ 10.30 ರಿಂದ ಮಧ್ಯಾಹ್ನ 2 ಗಂಟೆಯವರೆಗೆ ಇಲ್ಲಿನ ಸರಕಾರಿ ಐ.ಟಿ.ಐ. ಕಾಲೇಜು ಹಿಂದುಗಡೆಯಿರುವ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯಲ್ಲಿ ಮಿನಿ ಉದ್ಯೋಗ ಮೇಳವನ್ನು ಹಮ್ಮಿಕೊಳ್ಳಲಾಗಿದೆ ಎಂದು ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯ ಸಹಾಯಕ ನಿರ್ದೇಶಕರು ತಿಳಿಸಿದ್ದಾರೆ.
ಆಸಕ್ತಿಯುಳ್ಳ ಅಭ್ಯರ್ಥಿಗಳು ತಮ್ಮ ಎಲ್ಲಾ ಅಂಕಪಟ್ಟಿಗಳ ಝರಾಕ್ಸ್, ರೆಸೂಮ್ (ಬಯೋಡೆಟಾ) ಭಾವಚಿತ್ರಗಳು ಹಾಗೂ ಆಧಾರ್‌ಕಾರ್ಡ್ ದಾಖಲೆಗಳೊಂದಿಗೆ ಮಿನಿ ಉದ್ಯೋಗಮೇಳದಲ್ಲಿ ಭಾಗವಹಿಸಬಹುದಾಗಿದೆ. ಈ ಉದ್ಯೋಗ ಮೇಳದಲ್ಲಿ ಭಾಗವಹಿಸುವ ಅಭ್ಯರ್ಥಿ ಗಳಿಗೆ ಯಾವುದೇ ತರಹದ ಭತ್ಯೆಯನ್ನು ನೀಡಲಾಗುವುದಿಲ್ಲ. ಹೆಚ್ಚಿನ ಮಾಹಿತಿಗಾಗಿ ಕಲಬುರಗಿ ಜಿಲ್ಲಾ ಉದ್ಯೋಗ ವಿನಿಮಯ ಕಚೇರಿಯನ್ನು ಹಾಗೂ ಕಚೇರಿ ದೂರವಾಣಿ ಸಂಖ್ಯೆ 08472-274846, ಮೊಬೈಲ್ ಸಂಖ್ಯೆ 9620095270 ಸಂಪರ್ಕಿಸಲು ತಿಳಿಸಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

