ಬಾಗಲಕೋಟೆ : ಜಿಲ್ಲೆಯಲ್ಲಿ ನಿರಂತರವಾಗಿ ಮಳೆ ಸುರಿಯುತ್ತಿದ್ದು ಇದರಿಂದ ಜನ ಜೀವನ ಸಂಪೂರ್ಣವಾಗಿ ಅಸ್ತವ್ಯಸ್ತಗೊಂಡಿದೆ. ಇದೀಗ ಬಾಗಲಕೋಟೆ ಜಿಲ್ಲೆಯ ಬಾದಾಮಿ ತಾಲೂಕಿನ ಬನಶಂಕರಿ ದೇವಸ್ಥಾನ ಕೂಡ ಭಾರಿ ಮಳೆಯಿಂದಾಗಿ ಜಲಾವೃತವಾಗಿದೆ.
ಧಾರಾಕಾರ ಮಳೆ ಹಿನ್ನೆಲೆಯಲ್ಲಿ ಬನಶಂಕರಿ ದೇವಸ್ಥಾನಕ್ಕೆ ನೀರು ನುಗ್ಗಿದೆ.
ಬಾದಾಮಿ ಸಮೀಪದ ಬನಶಂಕರಿ ದೇವಸ್ಥಾನದ ಆವರಣ ಸಂಪೂರ್ಣವಾಗಿ ಜಲಾವೃತವಾಗಿದೆ. ಆದರೂ ಸಹ ಭಕ್ತರು ನೀರಿನಲ್ಲಿ ನಡೆದುಕೊಂಡು ಹೋಗಿ ದೇವಿಯ ದರ್ಶನವನ್ನು ಪಡೆದುಕೊಳ್ಳುತ್ತಿದ್ದಾರೆ.
bigtvnews | Hubli Dharwad News | Kannada News | Karnataka News Hubli News | News In Hubli | Local news

