Breaking News

ರಾಜ್ಯ ಸರ್ಕಾರದಿಂದ ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ 1.5 ಕೋಟಿ ಅನುದಾನ: ಸಚಿವ ಮಹದೇವಪ್ಪ

ಮೈಸೂರು: ವಾಲ್ಮೀಕಿ ಪುತ್ಥಳಿ ನಿರ್ಮಾಣಕ್ಕೆ ಅಗತ್ಯವಿರುವ ₹1.5 ಕೋಟಿ ಅನುದಾನವನ್ನು ರಾಜ್ಯ ಸರ್ಕಾರ ಬಿಡುಗಡೆ ಮಾಡಿದೆ ಎಂದು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ ಹೇಳಿದರು.
ಸಿದ್ಧಾರ್ಥನಗರದ ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿ ಭೂಮಿಪೂಜೆ ನೆರವೇರಿಸಿ ಮಾತನಾಡಿ, ವಾಲ್ಮೀಕಿ ಪ್ರತಿಮೆಯನ್ನು ತಾಲ್ಲೂಕು ಕಚೇರಿ ಎದುರು ನಿರ್ಮಿಸಲು ಪ್ರಸ್ತಾವ ಬಂದಾಗ ಸುಪ್ರೀಂಕೋರ್ಟ್ ಆದೇಶದಂತೆ ಸಾಧ್ಯವಿಲ್ಲವೆಂದು ಬೇರೆಡೆ ಸ್ಥಳ ಸೂಚಿಸಲು ತಿಳಿಸಲಾಗಿತ್ತು ಎಂದರು.
ಜಿಲ್ಲಾಧಿಕಾರಿ ಪ್ರಸ್ತಾಪಿಸಿದ ಜಾಗವನ್ನು ವಾಲ್ಮೀಕಿ ಸಮುದಾಯವು ಒಪ್ಪಿಕೊಂಡಿದ್ದು, ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಅನುದಾನ ಬಿಡುಗಡೆ ಮಾಡಿದ್ದಾರೆ. ಅಗತ್ಯವಿದ್ದರೆ ಹೆಚ್ಚುವರಿ ಅನುದಾನವನ್ನೂ ನೀಡಲಾಗುವುದು ಎಂದು ತಿಳಿಸಿದರು.
ದಲಿತರು, ಹಿಂದುಳಿದವರು, ಅಲ್ಪಸಂಖ್ಯಾತ ಸಮುದಾಯದ ಬಗ್ಗೆ ಕಾಂಗ್ರೆಸ್ ಹಾಗೂ ಸಿದ್ದರಾಮಯ್ಯ ಅವರಿಗೆ ಅಪಾರ ಕಾಳಜಿ ಇದೆ. ಪ್ರತಿ ವರ್ಷ ‍ಪುತ್ಥಳಿ ವಿಚಾರ ಪ್ರಸ್ತಾವ ಬಂದಾಗ ಬೇಸರಪಡುತ್ತಿದ್ದರು. ಈಗ ಅದರ ಕೊರತೆ ನೀಗಿದೆ ಎಂದರು.
ವಾಲ್ಮೀಕಿ ಮಹರ್ಷಿ ಒಂದು ಸಮುದಾಯಕ್ಕೆ ಮಾತ್ರ ಸೀಮಿತವಲ್ಲ ಮನುಕುಲದ ಆದಿಕವಿ ಚಿಂತನೆ, ತತ್ವಾದರ್ಶಗಳನ್ನು ಪ್ರತಿಯೊಬ್ಬರೂ ಪಾಲಿಸಬೇಕು. 4.08 ಲಕ್ಷ ಪುಟಗಳ ಎಂಟು ಅಧ್ಯಾಯವಿರುವ ರಾಮಾಯಣವು ಜಗತ್ತಿನಲ್ಲೇ ಬಹುದೊಡ್ಡ ಕಾವ್ಯ. ಅದು ಕೇವಲ ಪೂಜೆ ಮಾಡುವ ವಸ್ತುವಲ್ಲ ಬದುಕಿನ ವಿಕಾಸ ಮತ್ತು ಬದಲಾವಣೆಯ ದಾರಿದೀಪ ಎಂದು ಬಣ್ಣಿಸಿದರು.
ಬುದ್ದ, ಬಸವಣ್ಣ, ವಾಲ್ಮೀಕಿ, ಅಂಬೇಡ್ಕರ್ ಸೇರಿದಂತೆ ಮಹಾ ಪುರುಷರನ್ನು ಒಂದು ವರ್ಗಕ್ಕೆ ಸೀಮಿತಗೊಳಿಸಬಾರದು ಎಂದರು.

Share News

About BigTv News

Check Also

ಕೋಲಾರದಲ್ಲಿ ರೈತರು-ಅರಣ್ಯ ಇಲಾಖೆ ಮಧ್ಯೆ ಸಂಘರ್ಷ: ಸಿಬ್ಬಂದಿ ಮೇಲೆ ಮಚ್ಚಿನಿಂದ ಅಟ್ಯಾಕ್‌

ಕೋಲಾರ: ಜಿಲ್ಲೆಯ ಶ್ರೀನಿವಾಸಪುರ ತಾಲೂಕಿನ ಮಲ್ಲಂಪಲ್ಲಿ ಗ್ರಾಮದಲ್ಲಿ ಅರಣ್ಯ ಇಲಾಖೆ ಸಿಬ್ಬಂದಿ ಮೇಲೆ ಮಚ್ಚಿನಿಂದ ಹಲ್ಲೆ ನಡೆದಿದ್ದು, ಮೂವರು ಗಂಭೀರವಾಗಿ …

Leave a Reply

Your email address will not be published. Required fields are marked *