Breaking News

ಬೊಮ್ಮಾಯಿ ಪರ ಬ್ಯಾಟಿಂಗ್ ಮಾಡಿದ ಅರವಿಂದ ಬೆಲ್ಲದ್

ಹುಬ್ಬಳ್ಳಿ: ಕರ್ನಾಟಕದಲ್ಲಿ ಮೂರು ಉಪಚುನಾವಣೆ ನಡೆಯಲಿದೆ. ಅಭ್ಯರ್ಥಿಗಳ ಆಯ್ಕೆ ಕುರಿತು ಚರ್ಚೆ ನಡೆದಿದೆ. ಪಕ್ಷ ನನಗೆ ಶಿಗ್ಗಾಂವಿ ಕ್ಷೇತ್ರದ ವಿಚಾರವಾಗಿ ಮಾಹಿತಿ ಕೇಳಿದ್ರು. ನಾನು ಕ್ಷೇತ್ರ ಸುತ್ತಾಡಿದಾಗ ಮತ್ತೊಮ್ಮೆ ಬೊಮ್ಮಾಯಿ ಕುಟುಂಬಕ್ಕೆ ಅವಕಾಶ ಕೊಡಬೇಕು ಅನ್ನೋ ಕೂಗಿದೆ. ನನಗಿರೋ ಮಾಹಿತಿ ಪ್ರಕಾರ ಬೊಮ್ಮಾಯಿ ಅವರನ್ನು ದೆಹಲಿಗೆ ಕರೆದಿದ್ದಾರೆ. ಅಂತಿಮವಾಗಿ ಹೈಕಮಾಂಡ್ ತೀರ್ಮಾನ ಮಾಡಲಿದೆ ಎಂದು ಬೊಮ್ಮಾಯಿ ಪರ ಹುಬ್ಬಳ್ಳಿಯಲ್ಲಿ ವಿರೋಧ ಪಕ್ಷದ ಉಪನಾಯಕ ಅರವಿಂದ ಬೆಲ್ಲದ್ ಬ್ಯಾಟಿಂಗ್‌ ಮಾಡಿದರು.

ಮಾಧ್ಯಮಗೋಷ್ಠಿ ಏರ್ಪಡಿಸಿ ಮಾತನಾಡಿದ ಅವರು, ಮುರಗೇಶ ನಿರಾಣಿ ಟಿಕೆಟ್ ವಿಚಾರವಾಗಿ ನಿನ್ನೆ ಮಾತಾಡಿದ್ದಾರೆ. ಹಿಂದೆ ಅವರು ಟಿಕೆಟ್ ಪ್ರಯತ್ನ ಮಾಡಿದ್ದು ನಿಜ. ಬೇರೆ ಉತ್ತಮ ಅಭ್ಯರ್ಥಿಗಳು ಇದ್ದಾರೆ, ಆದ್ರೆ ಜನರ ಅಪೇಕ್ಷೆ ಕುಟುಂಬದ ಪರವಾಗಿದೆ. ಕೊನೆಗೆ ಹೈಕಮಾಂಡ್ ತೀರ್ಮಾನ ಎಲ್ಲರೂ ಒಪ್ಪಬೇಕು. ಗೆಲ್ಲೋ ಸೂಕ್ತ ಅಭ್ಯರ್ಥಿ ಬಗ್ಗೆ ಹೈಕಮಾಂಡ್ ತೀರ್ಮಾನ ಮಾಡುತ್ತೆ. ಹೈಕಮಾಂಡ್ ಕೂಡಾ ಎಲ್ಲ ಆಯಾಮಗಳಲ್ಲಿ ಸರ್ವೆ ಮಾಡಿದೆ. ಕೋರ್ ಕಮಿಟಿಯಿಂದ ಮೂರ್ನಾಲ್ಕು ಹೆಸರು ಹೋಗಿರೋ ಮಾಹಿತಿ ಇದೆ ಎಂದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *