Breaking News

ಶಾಲೆಗಳಲ್ಲಿ ಕಲಿಕೆಯ ಫಲಿತಾಂಶ ಸುಧಾರಿಸಲು ಸರ್ಕಾರದಿಂದ ಶಿಕ್ಷಣ ಕೋಪೈಲಟ್ ಯೋಜನೆ ಜಾರಿಗೆ: ಸಚಿವ ಮಧು ಬಂಗಾರಪ್ಪ

ಬೆಂಗಳೂರು: ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆಯು, ಶಿಕ್ಷಣ ಫೌಂಡೇಶನ್ ಮತ್ತು ಮೈಕ್ರೋಸಾಫ್ಟ್ ರಿಸರ್ಚ್ ಇಂಡಿಯಾದ ಸಹಯೋಗದೊಂದಿಗೆ ಸರ್ಕಾರಿ ಶಾಲೆಗಳಲ್ಲಿ ಕಲಿಕೆಯ ಫಲಿತಾಂಶಗಳನ್ನು ಸುಧಾರಿಸುವ ಗುರಿಯೊಂದಿಗೆ ಶಿಕ್ಷಣ ಕೋಪೈಲಟ್ ಯೋಜನೆಯನ್ನು ಜಾರಿಗೆ ತಂದಿದೆ ಎಂದು ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಸಚಿವರಾದ ಮಧು ಬಂಗಾರಪ್ಪ ತಿಳಿಸಿದ್ದಾರೆ.
ರಾಜ್ಯದ ನಗರ ಮತ್ತು ಗ್ರಾಮೀಣ ಭಾಗಗಳ 750 ಕ್ಕೂ ಹೆಚ್ಚು ಸರ್ಕಾರಿ ಶಾಲೆಗಳಿಂದ ಆಯ್ದ 1,000 ಶಿಕ್ಷಕರಿಗೆ ಶಿಕ್ಷಣ ಕೋಪೈಲಟ್‌ – ಎಐ ಚಾಲಿತ ಡಿಜಿಟಲ್‌ ಸಹಾಯವನ್ನು ನೀಡಲಾಗುವುದು. ಶಿಕ್ಷಕರ ಹಿಮ್ಮಾಹಿತಿ ಆಧಾರದ ಮೇಲೆ ಚಟುವಟಿಕೆಗಳು, ಮೌಲ್ಯಮಾಪನಗಳು, ಅನ್ವಯಗಳು, ಸಮಗ್ರ ಪಾಠ ಯೋಜನೆಗಳಂತಹ ಬೋಧನಾ ಸಂಪನ್ಮೂಲ ರಚಿಸಲು ಶಿಕ್ಷಣ ಕೋಪೈಲಟ್‌ ಸಹಾಯಕ ಎಂದು ತಿಳಿಸಿದ್ದಾರೆ.

Share News

About BigTv News

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *