ಹುಬ್ಬಳ್ಳಿ: ಮೈಸೂರಿನ ಮುಡಾ ಕಚೇರಿಯ ಮೇಲೆ ಜಾರಿ ನಿರ್ದೇಶನಾಲಯ (ED) ದಾಳಿಯನ್ನು ನಾವು ನಿರೀಕ್ಷೆ ಮಾಡಿದ್ವಿ. ಈಗ ಅದು ನಿಜವಾಗಿದೆ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ. ವಿಜಯೇಂದ್ರ ಹೇಳಿದ್ದಾರೆ.
ನಗರದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿದ ಅವರು, ಮುಡಾ ಪ್ರಕರಣದಲ್ಲಿ ಸಿಎಂ ಸಿದ್ದರಾಮಯ್ಯ ಅವರು ಎ1 ಆರೋಪಿ ಆಗಿದ್ದಾರೆ. ಇದರ ಸಂಪೂರ್ಣ ಜವಾಬ್ದಾರಿ ಮುಖ್ಯಮಂತ್ರಿ ಹೊರಬೇಕು. ಹೀಗಾಗಿ ಸಿದ್ದರಾಮಯ್ಯ ಅವರು ರಾಜೀನಾಮೆ ಕೊಡಲೇಬೇಕು. ಮುಡಾ ನಿವೇಶನ ಹಂಚಿಕೆಯಲ್ಲಿ 4500 ಕೋಟಿ ರೂಪಾಯಿಯಷ್ಟು ಅವ್ಯವಹಾರವಾಗಿದೆ ಎಂದು ದೂರಿದರು.
bigtvnews | Hubli Dharwad News | Kannada News | Karnataka News Hubli News | News In Hubli | Local news

