Breaking News

ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಮನವಿ‌ ಸಲ್ಲಿಕೆ

ನವಲಗುಂದ: ಬೆಣ್ಣೆ ಹಳ್ಳ ಹಾಗೂ ತುಪ್ಪರಿಹಳ್ಳ ಪ್ರವಾಹದಿಂದ ಸಂಕಷ್ಟದಲ್ಲಿರುವ ರೈತ ಸಮುದಾಯಕ್ಕೆ ಬೆಳೆವಿಮೆ ಹಾಗೂ ಪರಿಹಾರವನ್ನು ಸಕಾಲದಲ್ಲಿ ಒದಗಿಸುವಂತೆ ಆಗ್ರಹಿಸಿ ಭಾಜಪಾ ತಾಲೂಕಾಧ್ಯಕ್ಷ ಗಂಗಪ್ಪ ಮನಮಿ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರಿಗೆ ಮನವಿ ಮಾಡಿದರು.

ಜಿಲ್ಲಾಧಿಕಾರಿಗಳು ಇಂದು ಮೊರಬ ಗ್ರಾಮಕ್ಕೆ ಭೇಟಿ ನೀಡಿದ ಹಿನ್ನಲೆಯಲ್ಲಿ ಮನವಿ ಸಲ್ಲಿಸಿ ಮಾತನಾಡಿದ ಗಂಗಪ್ಪ ನವಲಗುಂದ ಗ್ರಾಮೀಣ ಭಾಗದ ರೈತರಿಗೆ ಪ್ರವಾಹದಿಂದಾಗಿ ಸಾಕಷ್ಟು ನಷ್ಟವಾಗಿದೆ. ರಸ್ತೆಗಳು ಸಂಪರ್ಕ ಕಡಿದುಕೊಂಡಿರುವದರಿಂದ ಸಂಚಾರ ವ್ಯವಸ್ಥೆ ಅಸ್ಥವ್ಯಸ್ಥಗೊಂಡಿರುವದರಿಂದ ಪರಿಸ್ಥಿತಿಯನ್ನು ಅವಲೋಕಿಸಿ ರೈತರ ನೆರವಿಗೆ ಪರಿಹಾರ ಕಲ್ಪಿಸಿ ಎಂದರು.

ಮನವಿ ಸ್ವೀಕರಿಸಿ ಮಾತನಾಡಿದ ಜಿಲ್ಲಾಧಿಕಾರಿಗಳು ತುರ್ತು ಕ್ರಮ ತೆಗೆದುಕೊಳ್ಳುವ ಭರವಸೆ ನೀಡಿದರು.

Share News

About Shaikh BigTv

Check Also

ಶಾಸಕ ಉಮೇಶ್ ಮೇಟಿ ಸೊಸೆ ವಿರುದ್ಧ ಅಕ್ರಮ ಆರೋಪ; ಎಂಡಿ ಓದುವಾಗ ಸರ್ಕಾರಿ ವೈದ್ಯೆಯಾಗಿ ವೇತನ ಪಡೆದರಾ ಅಂಕಿತಾ!

ಬಾಗಲಕೋಟೆ: ಖಾಸಗಿ ಕಾಲೇಜಿನಲ್ಲಿ MD ವ್ಯಾಸಂಗ ಮಾಡುತ್ತಲೇ ‘ನಮ್ಮ ಕ್ಲಿನಿಕ್’ನಲ್ಲಿ ವೈದ್ಯಾಧಿಕಾರಿಯಾಗಿ ಕರ್ತವ್ಯ ನಿರ್ವಹಿಸದೆ ₹75 ಸಾವಿರ ಸರ್ಕಾರಿ ವೇತನ …

Leave a Reply

Your email address will not be published. Required fields are marked *