Breaking News

ಮನೆ ಕುಸಿತ : ಪೊಲೀಸ್ ಕಮಿಷನ‌ರ್ ಎನ್. ಶಶಿಕುಮಾರ್ ಭೇಟಿ‌

ಹುಬ್ಬಳ್ಳಿ: ಅವಳಿ ನಗರದಲ್ಲಿ ಎರಡು ದಿನಗಳಿಂದ ನಿರಂತರವಾಗಿ ಸುರಿಯುತ್ತಿರೋ ಮಳೆಯಿಂದ ಗವಿ ಓಣಿಯಲ್ಲಿ ಮನೆ ಕುಸಿದು ಬಿದ್ದ ಪರಿಣಾಮ ಮನೆಯ ಮಾಲೀಕ ಗಾಯಗೊಂಡು ಆಸ್ಪತ್ರೆಗೆ ದಾಖಲಾದ ಘಟನೆ ಶುಕ್ರವಾರ ಸಾಯಂಕಾಲ ನಡೆದಿದ್ದು, ಮನೆ ಬಿದ್ದ ಮಾಹಿತಿ ತಿಳಿಯುತ್ತಿದ್ದ ಹಾಗೆ ಸ್ಥಳಕ್ಕೆ ಅವಳಿ ನಗರದ ಪೊಲೀಸ್ ಕಮಿಷನ‌ರ್ ಎನ್. ಶಶಿಕುಮಾರ್ ಹಾಗೂ ಡಿಸಿಪಿ ನಂದಗಾವಿ ಆಗಮಿಸಿ ಮಳೆಯಿಂದ ಬಿದ್ದ ಮನೆಯನ್ನು ವೀಕ್ಷಣೆ ಮಾಡಿ, ಸ್ಥಳೀಯರ ಜೊತೆ ಸಮಾಲೋಚನೆ ಕೂಡಾ ನಡೆಸಿದರು.

ಉತ್ತರ ವಿಭಾಗದ ಎಸಿಪಿ ಶಿವಪ್ರಕಾಶ ನಾಯ್ಕ ಘಟನಾ ಸ್ಥಳಕ್ಕೆ ಧಾವಿಸಿ, ಗಾಯಾಳುವನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ಕೊಡಿಸಿದ್ದಾರೆ. ಘಟನೆಯಲ್ಲಿ ಒಂದು ಬೈಕ್ ಕೂಡಾ ಸಂಪೂರ್ಣವಾಗಿ ಜಖಂಗೊಂಡಿದೆ.ಹುಬ್ಬಳ್ಳಿಯ ಕಮರಿಪೇಟ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Share News

About Shaikh BigTv

Check Also

ಮದುವೆಯಾಗಿ ಮಕ್ಕಳಿದ್ರೂ ಅಕ್ರಮ ಸಂಬಂಧ: ರೈಲಿಗೆ ತಲೆಕೊಟ್ಟು ವಿವಾಹಿತೆಯೊಂದಿಗೆ ಯುವಕ ಆತ್ಮಹತ್ಯೆ

ಮಂಡ್ಯದ ವಿಸಿ ಫಾರಂ ರಸ್ತೆಯ ರೈಲ್ವೆ ಹಳಿಯಲ್ಲಿ ರೈಲಿಗೆ ತಲೆಕೊಟ್ಟು ವಿವಾಹಿತೆ ಸಹನಾ (25) ಮತ್ತು ರಾಹುಲ್ (23) ಆತ್ಮಹತ್ಯೆಗೆ …

Leave a Reply

Your email address will not be published. Required fields are marked *