Breaking News

ಅಂಜಲಿ ಅಂಬಿಗೇರ ಕೊಲೆ ಪ್ರಕರಣ: ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು

ಹುಬ್ಬಳ್ಳಿ: ವೀರಾಪುರ ಓಣಿ ಕರಿಯಮ್ಮನ ಗುಡಿ ಬಳಿ ಮೇ 15ರಂದು ನಡೆದಿದ್ದ ಅಂಜಲಿ ಅಂಬಿಗೇರ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ರಾಜ್ಯ ಸರ್ಕಾರ ಅವರ ಕುಟುಂಬಕ್ಕೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿ ಆದೇಶಿಸಿದೆ.

ಅಂದು ಬೆಳಗಿನ ಜಾವ ಪರಿಚಿತನಾದ ಗಿರೀಶ ಸಾವಂತ ಎಂಬಾತ ಅಂಜಲಿ ಅಂಬಿಗೇರ (20) ಮನೆಗೆ ನುಗ್ಗಿ ಹತ್ಯೆಗೈದು ಪರಾರಿ ಯಾಗಿದ್ದ ಈ ಘಟನೆಯನ್ನು ಗೃಹಮಂತ್ರಿ ಡಾ. ಜಿ. ಪರಮೇಶ್ವರ ಅವರು ವಿಶೇಷ ಪ್ರಕರಣವೆಂದು ಪರಿಗಣಿಸಿ ಮೃತಳ ಕುಟುಂಬಸ್ಥರಿಗೆ ಮುಖ್ಯ ಮಂತ್ರಿಗಳ ಪರಿಹಾರ ನಿಧಿ ಮಂಜೂರು ಮಾಡಲು ಮುಖ್ಯಮಂತ್ರಿಗಳಿಗೆ ಮನವಿ ಮಾಡಿದ್ದರು.

ಸರ್ಕಾರ ಈ ವರದಿಯನ್ನಾಧರಿಸಿ ಮೃತಳ ಕುಟುಂಬದ ಕಾನೂನು ಬದ್ಧ ನೈಜ ವಾರಸುದಾರರಿಗೆ 5 ಲಕ್ಷ ರೂಪಾಯಿ ಪರಿಹಾರ ಮಂಜೂರು ಮಾಡಿದೆ. ಧಾರವಾಡ ಜಿಲ್ಲಾಧಿಕಾರಿ ಖಾತೆಗೆ ರವಾನಿಸಲಾಗಿದೆ ಎಂದು ಮುಖ್ಯಮಂತ್ರಿಗಳ ಕಾರ್ಯದರ್ಶಿ ಟಿ. ಎ. ಗೋಪಾಲ್ ಆದೇಶದಲ್ಲಿ ತಿಳಿಸಿದ್ದಾರೆ.

ಈ ಕುರಿತಂತೆ ಜಿಲ್ಲಾಧಿಕಾರಿ ದಿವ್ಯ ಪ್ರಭು ಅವರು, ಪರಿಹಾರ ಮಂಜೂರಾದ ಬಗ್ಗೆ ಸ್ಪಷ್ಟಪಡಿಸಿದ್ದು, ಅಂಜಲಿ ಅಂಬಿಗೇರ ಕುಟುಂಬದವರಿಗೆ ಮುಖ್ಯಮಂತ್ರಿಗಳ ಪರಿಹಾರ ನಿಧಿಯಿಂದ 5 ಲಕ್ಷರೂ. ಪರಿಹಾರ ಬಿಡುಗಡೆ ಆಗಿದೆ. ಅದನ್ನು ಶೀಘ್ರವೇ ಶಹರ ತಹಶೀಲ್ದಾರ್ ಮೂಲಕ ರೀತಿ ರಿವಾಜು ಪ್ರಕಾರ ಕಾನೂನು ಬದ್ಧವಾದ ನೈಜ ವಾರಸುದಾರರಿಗೆ ವಿತರಿಸಲಾಗುವುದು ಎಂದು ಸ್ಪಷ್ಟಪಡಿಸಿದ್ದಾರೆ.

Share News

About Shaikh BigTv

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *