Breaking News

ಬೆಣ್ಣೆ ಹಳ್ಳದಲ್ಲಿ ಕೊಚ್ಚಿಹೋಗಿದ್ದ ಮೂವರು ವ್ಯಕ್ತಿಗಳು, ಕುರಿಗಳ ರಕ್ಷಣೆ

ಹುಬ್ಬಳ್ಳಿ: ವ್ಯಾಪಕ ಮಳೆಯಿಂದಾಗಿ ಬೆಣ್ಣೆ ಹಳ್ಳದಲ್ಲಿ ಪ್ರವಾಹ ಪರಿಸ್ಥಿತಿ ಉಂಟಾಗಿ ನೂರಾರು ಕುರಿ ಹಾಗೂ ಮೂವರು ಕೊಚ್ಚಿ ಹೋಗಿರುವ ಅವಾಂತರ ಸೃಷ್ಟಿಯಾಗಿತ್ತು.
ಬೆಣ್ಣೆ ಹಳ್ಳದ ನೀರಿಗೆ ಸಿಲುಕಿ ಹಾಕಿಕೊಂಡಿದ್ದ ಮೂವರನ್ನು ಹಾಗೂ 150 ಕುರಿಗಳನ್ನು ಅಗ್ನಿಶಾಮಕ ದಳದ ಸಿಬ್ಬಂದಿ ರಕ್ಷಣೆ ಮಾಡಿದ್ದಾರೆ.
ಈ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲೂಕಿನ ದೇವನೂರು ಗ್ರಾಮದ ಹತ್ತಿರ ನಡೆದಿದೆ.
ಕುರಿಗಳನ್ನು ಮೇಯಿಸಲು ಹೋದ ಹನುಮಂತ ಬೆನಕನಹಳ್ಳಿ, ಮಂಜಪ್ಪ ಬೆನಕನಹಳ್ಳಿ ಮತ್ತು ಇನ್ನೋರ್ವ ವ್ಯಕ್ತಿ ಸೇರಿ 150 ಕುರಿಗಳು ನೀರಿನ ಪ್ರವಾಹಕ್ಕೆ ಸಿಲುಕಿದ್ದನ್ನು ಕಂಡು ಸ್ಥಳೀಯರು ತಾಲೂಕು ಆಡಳಿತಕ್ಕೆ ಕರೆ ಮಾಡಿದ್ದರು. ಕೂಡಲೇ ಸ್ಥಳಕ್ಕೆ ಆಗಮಿಸಿದ ಅಗ್ನಿಶಾಮಕ ಸಿಬ್ಬಂದಿ ಕಾರ್ಯ ಪ್ರವೃತ್ತವಾಗಿ ರಭಸದಿಂದ ಹರಿಯುತ್ತಿರುವ ನೀರಿನ ಮಧ್ಯೆ ಹಗ್ಗ ಕಟ್ಟಿ ಮೂವರು ವ್ಯಕ್ತಿಗಳು ಮತ್ತು ಕುರಿಗಳ ರಕ್ಷಣೆ ಮಾಡಿದ್ದಾರೆ.

Share News

About BigTv News

Check Also

ಬೆಂಗಳೂರಲ್ಲಿ ನಕಲಿ ಡೇಟಿಂಗ್ ಬಲೆ, 20 ಲಕ್ಷ ರೂ. ಮೌಲ್ಯದ ಚಿನ್ನ ಲೂಟಿ

ಬೆಂಗಳೂರು: ಚಂದ್ರಾ ಲೇಔಟ್‌ನಲ್ಲಿ ಡೇಟಿಂಗ್ ಆಯಪ್ ಮೂಲಕ ಪರಿಚಯವಾದ ವ್ಯಕ್ತಿಯನ್ನು ಮನೆಗೆ ಕರೆಸಿಕೊಂಡ ಯುವಕನಿಗೆ ಚಾಕು ತೋರಿಸಿ ಬೆದರಿಸಿ, 226 …

Leave a Reply

Your email address will not be published. Required fields are marked *