Breaking News

ಅ. 25 ರಂದು ಯಲಾಕುನ್ನಿ ಚಲನಚಿತ್ರ ಬಿಡುಗಡೆ

ಹುಬ್ಬಳ್ಳಿ: ಸೌಂದರ್ಯ ಸಿನಿ ಕಂಬೈನ್ಸ್ ಹಾಗೂ ನರಸಿಂಹ ಸಿನಿಮಾಸ್ ಲಾಂಛನದಲ್ಲಿ ಅನುಸೂಯ ಕೋಮಲ್ ಕುಮಾ‌ರ್, ಸಹನ ಮೂರ್ತಿ ಅವರು ನಿರ್ಮಿಸಿರುವ ಯಲಾಕುನ್ನಿ ಚಲನಚಿತ್ರ ಅಕ್ಟೋಬರ್ 25 ರಂದು ರಾಜ್ಯಾದ್ಯಂತ ತೆರೆಗೆ ಕಾಣಲಿದೆ ಎಂದು ನಟ ಕೋಮಲ್ ಕುಮಾರ್ ಹೇಳಿದರು.

ನಗರದಲ್ಲಿಂದು ಪತ್ರಿಕಾಗೋಷ್ಠಿಯಲ್ಲಿ ಮಾತನಾಡಿದ ಅವರು, ರಾಜ್ಯಾದ್ಯಂತ ಸುಮಾರು 200 ಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಚಿತ್ರ ತೆರೆ ಕಾಣಲಿದ್ದು, ಹಳ್ಳಿ ಸೊಗಡಿನ ಚಿತ್ರ ಇದಾಗಿದೆ ಎಂದರು.

ಧರ್ಮ ವಜ್ರಮುನಿ ಅವರ ಮೊಮ್ಮಗ ಆಕರ್ಷ್ ಕೂಡಾ ಈ ಚಿತ್ರದ ನನ್ನ ಬಾಲ್ಯದ ಪಾತ್ರ ಮಾಡಿದ್ದು, ನನ್ನ ಅಣ್ಣನ ಮಗ ಯತಿರಾಜ್, ಜಯಸಿಂಹ ಮುಸುರಿ, ಮಯೂರ್ ಪಟೇಲ್, ಸಾಧುಕೋಕಿಲ್‌, ದತ್ತಣ್ಣಾ, ಮಿತ್ರ, ತಬಲಾ ನಾಣಿ ಸೇರಿದಂತೆ ಮೊದಲಾದವರು ಅಭಿನಯಿಸಿದ್ದಾರೆ.

ಧರ್ಮವಿಶ್ ಸಂಗೀತ ಸಂಯೋಜಿಸಿರುವ ನಾಲ್ಕು ಹಾಡುಗಳು ಈಗಾಗಲೇ ಎಲ್ಲರ ಮನ ಗೆದ್ದಿವೆ, ಇನ್ನೂ ಎನ್.ಆರ್ ಪ್ರದೀಪ್ ಕಥೆ, ಚಿತ್ರಕಥೆ, ಸಾಹಿತ್ಯ, ಸಂಭಾಷಣೆ ಬರೆದು ನಿರ್ದೇಶಿಸಿರುವ ಚಿತ್ರ ಇದಾಗಿದೆ ಎಂದು ಅವರು ಹೇಳಿದರು.

Share News

About Shaikh BigTv

Check Also

TCS ನಾಸಿಕ್ ಪ್ರಕರಣ: ಆರೋಪಿ ನಿದಾ ಖಾನ್ ಪತಿ ಬಂಧನ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್) ಶಾಖೆಯ ಸುತ್ತಲಿನ ವಿವಾದ ನಾಟಕೀಯ ತಿರುವು ಪಡೆದುಕೊಂಡಿದ್ದು, ಕಂಪನಿಗೆ ಸಂಬಂಧಿಸಿದ ಒಂಬತ್ತು …

Leave a Reply

Your email address will not be published. Required fields are marked *