Breaking News

ಅ.23 ರಿಂದ ಮೂರು ದಿನ ಬೆಳಗಾವಿಯಲ್ಲಿ ಕಿತ್ತೂರು ಉತ್ಸವ: ಶಾಸಕ ಬಾಬಾಸಾಹೇಬ್ ಪಾಟೀಲ್ ಘೋಷಣೆ

ಬೆಳಗಾವಿ: ಅಕ್ಟೋಬರ್​​ 23ರಿಂದ ಮೂರು ದಿನ ಕಿತ್ತೂರು ಉತ್ಸವ ನಡೆಯಲಿದ್ದು, ಕಿತ್ತೂರು ಪಟ್ಟಣದ ಕೋಟೆ ಆವರಣದಲ್ಲಿ ಆಯೋಜನೆ ಮಾಡಲಾಗಿದೆ ಎಂದು ಶಾಸಕ ಬಾಬಾಸಾಹೇಬ್ ಪಾಟೀಲ್ ಹೇಳಿದ್ದಾರೆ. ನಗರದ ಪ್ರವಾಸಿ ಮಂದಿರದಲ್ಲಿ ಮಾತನಾಡಿದ ಅವರು, ಕಿತ್ತೂರು ಉತ್ಸವಕ್ಕೆ ರಾಜ್ಯ ಸರ್ಕಾರ 5 ಕೋಟಿ ರೂ ಅನುದಾನ ನೀಡಿದೆ. ಇನ್ನೂ ಹೆಚ್ಚಿನ ಅನುದಾನ ನೀಡುವಂತೆ ಸರ್ಕಾರಕ್ಕೆ ಮನವಿ ಮಾಡುತ್ತೇವೆ ಎಂದು ಹೇಳಿದ್ದಾರೆ.
ಕಿತ್ತೂರು ರಾಣಿ ಚೆನ್ನಮ್ಮರ 200ನೇ ವಿಜಯೋತ್ಸವ ಕಾರ್ಯಕ್ರಮ ಕೂಡ ಮಾಡುತ್ತೇವೆ ಅ.25ರಂದು ನಡೆಯುವ ಸಮಾರೋಪ ಸಮಾರಂಭಕ್ಕೆ ಸಿಎಂ ಸಿದ್ದರಾಮಯ್ಯ ಮತ್ತು ಡಿಸಿಎಂ ಡಿಕೆ ಶಿವಕುಮಾರ್ ಅವರಿಗೆ ಆಹ್ವಾನಿಸಲಾಗಿದೆ ಎಂದು ತಿಳಿಸಿದ್ದಾರೆ.
ಉತ್ಸವದ ವೇಳೆ ಮಹಿಳೆಯರಿಗೆ ವಿಶೇಷ ಕ್ರೀಡೆಗಳನ್ನು ಆಯೋಜಿಸಿದ್ದೇವೆ ಅ.22ರ ಸಂಜೆ ಬೆಳಗಾವಿಯಲ್ಲಿ ಸಾಂಸ್ಕೃತಿಕ ಕಾರ್ಯಕ್ರಮ ಆಯೋಜನೆ ಮಾಡಲಾಗಿದೆ ಎಂದು ಹೇಳಿದ್ದಾರೆ.

Share News

About BigTv News

Check Also

ಅನ್ಯಕೋಮಿನ ಪಾಗಲ್ ಪ್ರೇಮಿಯಿಂದ ಟಾರ್ಚರ್ – ವಿದ್ಯಾರ್ಥಿನಿ ಸೂಸೈಡ್!

ಹಾಸನ: ಪ್ರೀತಿಸುವಂತೆ ಒತ್ತಾಯಿಸಿ ಕಿರುಕುಳ ನೀಡಿದ್ದಲ್ಲದೆ, ಖಾಸಗಿ ಫೋಟೋಗಳನ್ನು ಸಾಮಾಜಿಕ ಜಾಲತಾಣದಲ್ಲಿ ಹಾಕಿ ಬೆದರಿಕೆ ಹಾಕಿದ ಆರೋಪದಿಂದ ಮನನೊಂದ 23 …

Leave a Reply

Your email address will not be published. Required fields are marked *