Breaking News

ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರು ಪೊಲೀಸರು ದಾಳಿ: ಪರಿಶೀಲನೆ ನಡೆಸುತ್ತಿರುವ ಖಾಕಿ

ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಗೋಪಾಲ ಜೋಶಿ ನಿವಾಸದ ಮೇಲೆ ಬೆಂಗಳೂರಿನ ಬಸವೇಶ್ವರ ನಗರ ಠಾಣೆ ಪೊಲೀಸರ ದಾಳಿ ನಡೆಸಿದ್ದಾರೆ.

ಗೋಪಾಲ ಜೋಶಿ, ಕೇಂದ್ರ ಸಚಿವ ಪ್ರಲ್ಹಾದ್ ಜೋಶಿ ಸಹೋದರರಾಗಿದ್ದು, ವಂಚನೆ ಪ್ರಕರಣದಲ್ಲಿ ಬಂಧನಕ್ಕೊಳಗಾಗಿರುವ ಗೋಪಾಲ ಜೋಶಿಯವರ
ಹುಬ್ಬಳ್ಳಿಯ ಇಂದಿರಾ ಕಾಲೋನಿಯಲ್ಲಿರುವ ನಿವಾಸದ ಮೇಲೆ ದಾಳಿ ಮಾಡಿ ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ನಿವಾಸದ ಹಿಂಭಾಗದಲ್ಲಿರುವ ಗೋಪಾಲ ಜೋಶಿ ನಿವಾಸಕ್ಕೆ
ಬೆಂಗಳೂರನಿಂದ ಖಾಸಗಿ ವಾಹನದಲ್ಲಿ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಇನ್ನೂ ಎಸಿಪಿ ಚಂದನ್ ನೇತೃತ್ವದಲ್ಲಿ ತೀವ್ರ ವಿಚಾರಣೆ ನಡೆಸಲಾಗಿದ್ದು, ಪ್ರಕರಣಕ್ಕೆ ಸಂಬಂಧಿಸಿದಂತೆ ದಾಖಲೆ ಕಲೆ ಹಾಕುತ್ತಿದ್ದಾರೆ.

Share News

About Shaikh BigTv

Check Also

ಅಕ್ರಮ ಕಲ್ಲು ಸಾಗಾಟದ ವಿರುದ್ಧ ಕಾರ್ಯಾಚರಣೆ: 9 ಲಾರಿಗಳು, ನಾಲ್ಕು ಹಿಟಾಚಿ ಸಹಿತ ಸೊತ್ತುಗಳು ವಶ

ಉಡುಪಿ: ಕಾರ್ಕಳ ತಾಲೂಕಿನಲ್ಲಿ ಅಕ್ರಮ ಕಲ್ಲು ಸಾಗಾಟದ ವಿರುದ್ಧ ಪೊಲೀಸರು ಕಾರ್ಯಾಚರಣೆ ನಡೆಸಿ, ಹಲವರನ್ನು ಬಂಧಿಸಿ ಲಾರಿ, ಟಿಪ್ಪರ್, ಹಿಟಾಚಿ …

Leave a Reply

Your email address will not be published. Required fields are marked *