Breaking News

ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯ ನಿರ್ವಹಿಸಿ: ಸಚಿವ ಪ್ರಿಯಾಂಕ್ ಖರ್ಗೆ

ಬೆಂಗಳೂರು: ಸಮನ್ವಯತೆ, ಸಮಯಪ್ರಜ್ಞ ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಮಸ್ಯೆಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚ ಸೂತ್ರ ಅಳವಡಿಸಿಕೊಂಡು ಅಧಿಕಾರಿಗಳು ಕಾರ್ಯನಿರ್ವಹಿಸಿದರೆ ಎಲ್ಲ ಸಮಸ್ಯೆಗಳಿಗೂ ಪರಿಹಾರ ಸಿಗಲಿದೆ ಎಂದು ಸಚಿವ ಪ್ರಿಯಾಂಕ್​ ಖರ್ಗೆ ಸಲಹೆ ನೀಡಿದ್ದಾರೆ.
ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್​ರಾಜ್​ ಇಲಾಖೆ, ಖಾಸಗಿ ಹೋಟೆಲ್​ನಲ್ಲಿ ಇಂದು ಆಯೋಜಿಸಲಾಗಿದ್ದ ಪಂಚಾಯತ್​ರಾಜ್​ ಅಧಿಕಾರಿಗಳ ಸಮ್ಮೇಳನ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು ನಮ್ಮ ಇಲಾಖೆ ಅಧಿಕಾರಿಗಳು ಗುತ್ತಿಗೆದಾರರ ಜತೆ ಚೆನ್ನಾಗಿ ಸಮನ್ವಯತೆ ಹೊಂದಿದ್ದಾರೆ ಆದರೆ, ಅಧಿಕಾರಿಗಳ ನಡುವೆ ಪರಸ್ಪರ ಸಮನ್ವಯತೆ ಇಲ್ಲ ಕೆಲ ಅಧಿಕಾರಿಗಳು ಬರೀ ಮೊಬೈಲ್​ನಲ್ಲೇ ಕಾಲ ಕಳೆಯುತ್ತಿದ್ದಾರೆ ಈ ವರ್ತನೆ ಬದಲಾಗಬೇಕಿದೆ ಅಧಿಕಾರಿಗಳು ಪರಸ್ಪರ ಸಮನ್ವಯದಿಂದ ಕಾರ್ಯನಿರ್ವಹಿಸುವ ಜೊತೆಗೆ ಇತರ ಇಲಾಖೆಗಳೊಂದಿಗೆ ಸಮನ್ವಯತೆ ಸಾಧಿಸಿ ದಕ್ಷತೆಯಿಂದ ಕೆಲಸ ಮಾಡಬೇಕು. ಆಳುವ ಪ್ರವೃತ್ತಿ ಬದಿಗಿರಿಸಿ ಜನರ ಸಮಸ್ಯೆ ಆಲಿಸಿ ಪರಿಹರಿಸುವ ಕಾರ್ಯ ಮಾಡಬೇಕು ಪ್ರಗತಿಯೆಂದರೆ ಕೇವಲ ಅಂಕಿ ಅಂಶಗಳಲ್ಲ ಗ್ರಾಮೀಣ ಜನರಿಗೆ ಬದುಕು ಸುಧಾರಣೆ ಮಾಡುವುದನ್ನು ಮುಖ್ಯ ಧ್ಯೇಯವಾಗಬೇಕು ಎಂದು ಸಲಹೆ ನೀಡಿದರು.
ನಾಲ್ಕು ಪ್ರಮುಖ ಯೋಜನೆಗಳು, ಆಯಪ್​ ಹಾಗು ನೀತಿಯನ್ನು ಸಮ್ಮೇಳನದಲ್ಲಿ ಅನುಷ್ಠಾನಕ್ಕೆ ತರಲಾಗಿದೆ. ಗ್ರಾಮೀಣ ಕುಡಿಯುವ ನೀರಿನ ಕಾರ್ಯಾಚರಣೆ ಮತ್ತು ನಿರ್ವಹಣೆ ನೀತಿ, ಜೀವಜಲ ನೀರಿನ ಗುಣಮಟ್ಟ ಆಯಪ್​, ಸೇವಾ ದರ್ಶಕ ತಂತ್ರಾಂಶ, ಮಹಾತ್ಮ ಗಾಂಧಿ ರಾಷ್ಟ್ರೀಯ ಉದ್ಯೋಗ ಖಾತ್ರಿ ಯೋಜನೆ ಆಯಪ್​ ಲೋಕಾರ್ಪಣೆ ಮಾಡಿದ್ದೇವೆ. ಇದು ದೇಶಕ್ಕೆ ಮಾದರಿಯಾಗಿದೆ ಮಹತ್ವ ಜವಾಬ್ದಾರಿ ಹೊಂದಿರುವ ಇಲಾಖೆ ಅಧಿಕಾರಿಗಳ ನಡುವೆ ಸಮನ್ವಯತೆ ಕೊರತೆ ಹೋಗಲಾಡಿಸಲು ಸಮ್ಮೇಳನದ ಮುಖ್ಯ ಉದ್ದೇಶ. ಸಮ್ಮೇಳನದಲ್ಲಿ ನಡೆದ ಚರ್ಚೆ, ಅಭಿಪ್ರಾಯಗಳು ಗ್ರಾಮಗಳ ಅಭಿವೃದ್ಧಿ, ಪ್ರಗತಿ, ಕಾರ್ಯಕ್ರಮಗಳ ಸಬಲೀಕರಣಕ್ಕೆ ಸಹಾಯವಾಗಲಿದೆ ಎಂದು ತಿಳಿಸಿದರು. ಶಾಸಕ ಶರತ್​ ಬಚ್ಚೇಗೌಡ, ಇಲಾಖೆ ಕಾರ್ಯದರ್ಶಿ ಅಂಜುಮ್​ ಪರ್ವೇಜ್​, ಆಯುಕ್ತ ಪವನ್​ ಕುಮಾರ್​ ಮಾಲಿಪಾಟಿ ಸೇರಿ ಇಲಾಖೆ ಸೇರಿ ಮತ್ತಿತರರಿದ್ದರು.

Share News

About bigtvnews22

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *