Breaking News

ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭ: ರಾಜ್ಯ ಸರ್ಕಾರ ನಿರ್ಧಾರ

ದಾವಣಗೆರೆ: ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲು ರಾಜ್ಯ ಸರ್ಕಾರ ನಿರ್ಧರಿಸಿದೆ.
ಶಿವಮೊಗ್ಗದಲ್ಲಿ ಕೆಳದಿ ಶಿವಪ್ಪನಾಯಕ ಕೃಷಿ ಮತ್ತು ತೋಟಗಾರಿಕೆ ವಿಜ್ಞಾನಿಗಳ ವಿಶ್ವವಿದ್ಯಾಲಯ, ಹಾಗೂ ಕೃಷಿ ಮತ್ತು ಕೃಷಿ ಸಂಬಂಧಿತ ಅಭಿವೃದ್ದಿ ಇಲಾಖೆಗಳ ಸಹಯೋಗದೊಂದಿಗೆ ಆಯೋಜಿಸಲಾಗಿದ್ದ ನವುಲೆಕೃಷಿ ಕಾಲೇಜು ಆವರಣದಲ್ಲಿ ಪೌಷ್ಟಿಕ ಆಹಾರಕ್ಕಾಗಿ ವಿಕಸಿತ ಕೃಷಿ ಧ್ಯೇಯ ವಾಕ್ಯದೊಂದಿಗೆ ಆಯೋಜಿಸಲಾಗಿದ್ದ ಕೃಷಿ-ತೋಟಗಾರಿಕ ಮೇಳದಲ್ಲಿ ಮಾತನಾಡಿದ ಶಾಲಾ ಶಿಕ್ಷಣ ಮತ್ತು ಸಾಕ್ಷರತಾ ಇಲಾಖೆ ಹಾಗೂ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ತಿಳಿಸಿದರು.
ವಿದ್ಯಾರ್ಥಿಗಳಿಗೆ ವಾರದಲ್ಲಿ ಒಂದು ದಿನ ಸಾಮಾನ್ಯ ಜ್ಞಾನ ಕಲಿಕೆ ಆರಂಭಿಸಲಾಗುವುದು ವ್ಯಕ್ತಿ ತ್ವ ವಿಕಸನ, ಕೃಷಿಯ ಬಗ್ಗೆಯೂ ತಿಳಿಸಲಾಗುವುದು ಎಂದರು.
ಕೃಷಿ ಕ್ಷೇತ್ರನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಹಾಗೂ ಕೈಗಾರಿಕೆಯಂತೆ ಕಾಣಬೇಕಿದೆ ಇಂದಿನ ಕೃಷಿ ಮೇಳದಲ್ಲಿ ಹಲವಾರು ಜಿಲ್ಲೆಗಳ ರೈತರು ಆಸಕ್ತಿಯಿಂದ ಪಾಲ್ಗೊಂಡಿದ್ದಾರೆ ಕೃಷಿಯನ್ನು ವೈಜ್ಞಾನಿಕವಾಗಿ ಅಭಿವೃದ್ಧಿಪಡಿಸಬೇಕು ಇನ್ನಷ್ಟು ಸಂಶೋಧನೆ ಆಗಬೇಕು ಪ್ರಸ್ತುತ ಹಗಲು ರಾತ್ರಿ ಸಂಶೋಧನೆ ಮೂಲಕ ರೈತರಿಗೆ ಸಹಕರಿಸುತ್ತಿರುವ ಸಂಶೋಧಕರು, ವಿಜ್ಞಾನಿಗಳಿಗೆ, ತಜ್ಞರಿಗೆ ಕೃತಜ್ಞತೆಗಳು. ರೈತರ ಹಿತದೃಷ್ಟಿಯಿಂದ ವಿವಿ ಸ್ಥಾಪನೆಯಾಗಿದ್ದು, ವಿಶ್ವವಿದ್ಯಾಲಯ ಸ್ಥಾಪನೆಗೆ ಕಾರಣರಾದ ಮಾಜಿ ‌ಮುಖ್ಯಮಂತ್ರಿ ಎಸ್. ಬಂಗಾರಪ್ಪ, ಕಾಗೋಡು ತಿಮ್ಮಪ್ಪನವರು ಹಾಗೂ ಶ್ರಮಿಸಿದ ಎಲ್ಲರಿಗೆ ಧನ್ಯವಾದಗಳು ಎಂದರು.

Share News

About BigTv News

Check Also

ಮಣಿಪುರದಲ್ಲಿ ಮತ್ತೆ ಹಿಂಸಾಚಾರ: ಅಪಹರಿಸಿ ವ್ಯಕ್ತಿ ಹತ್ಯೆ

ಮಣಿಪುರದಲ್ಲಿ ಮತ್ತೆ ಹಿಂಸಾಚಾರ ಉಲ್ಬಣಗೊಂಡಿದ್ದು ಮೈತೇಯಿ ಸಮುದಾಯಕ್ಕೆ ಸೇರಿದ ವ್ಯಕ್ತಿಯನ್ನು ಶಂಕಿತ ಕುಕಿ ಸಮುದಾಯದ ಬಂಡುಕೋರರು ಅಪಹರಿಸಿ ಗುಂಡಿಕ್ಕಿ ಹತ್ಯೆ …

Leave a Reply

Your email address will not be published. Required fields are marked *