ಹುಬ್ಬಳ್ಳಿ: ಗೋಪಾಲ್ ಜೋಶಿ ಪ್ರಕರಣದಲ್ಲಿ ಕಾಂಗ್ರೆಸ್ ಪಕ್ಷದವರು ವಿನಾಕಾರಣ ಕೇಂದ್ರ ಸಚಿವ ಪ್ರಹ್ಲಾದ ಜೋಶಿ ಅವರ ಘನತೆ, ಗೌರವಕ್ಕೆ ಧಕ್ಕೆ ತರುವ ಕೆಲಸ ಮಾಡಬಾರದು ಎಂದು ಹುಬ್ಬಳ್ಳಿ ಸೆಂಟ್ರಲ್ ವಿಧಾನಸಭಾ ಕ್ಷೇತ್ರದ ಶಾಸಕ ಮಹೇಶ ಟೆಂಗಿನಕಾಯಿ ಆಗ್ರಹಿಸಿದ್ದಾರೆ.
ಹುಬ್ಬಳ್ಳಿಯಲ್ಲಿ ಇಂದು ಮಾಧ್ಯಮದವರೊಂದಿಗೆ ಮಾತನಾಡಿ, ಕಾಂಗ್ರೆಸ್ ಪಕ್ಷ ಕೇಂದ್ರ ಸಚಿವರ ಮೇಲೆ ಗೂಬೆ ಕೂರಿಸುವ ಕೆಲಸ ಮಾಡಬಾರದು. ಇದನ್ನು ತೀವ್ರವಾಗಿ ವಿರೋಧಿಸುತ್ತೇವೆ ಎಂದು ಹೇಳಿದರು.
ಪ್ರಲ್ಲಾದ ಜೋಶಿ ಅವರ ಕುಟುಂಬ ಕಳೆದ 30 ವರ್ಷಗಳಿಂದಲೂ ಪ್ರತ್ಯೇಕವಾಗಿದೆ. ಅಲ್ಲದೇ, ಸಹೋದರರೊಂದಿಗೆ ತಮ್ಮ ಆರ್ಥಿಕ-ಕೌಟುಂಬಿಕ ವ್ಯವಹಾರವೂ ಇಲ್ಲ. ಯಾರಾದರೂ ನನ್ನ ಹೆಸರು ದುರ್ಬಳಕೆಗೆ ಯತ್ನಿಸಿದರೆ ಅದಕ್ಕೂ ತಮಗೂ ಸಂಬಂಧವಿಲ್ಲ. ನಾನು ಬಾಧ್ಯಸ್ತನಲ್ಲ ಎಂಬುದನ್ನು 2012ರಲ್ಲೇ ಸಚಿವರು ಕೋರ್ಟ್ ಅಫಿಡವಿಟ್ ಮೂಲಕ ಪ್ರಕಟಿಸಿದ್ದಾರೆ ಎಂದು ಮಹೇಶ ತೆಂಗಿನಕಾಯಿ ಸ್ಪಷ್ಟಪಡಿಸಿದರು.
ಗೋಪಾಲ್ ಜೋಶಿ ಪ್ರಕರಣಕ್ಕೂ ಸಚಿವರಿಗೂ ಯಾವುದೇ ಸಂಬಂಧವಿಲ್ಲ. ಗೋಪಾಲ್ ಜೋಶಿ ಅವರು ತಪ್ಪೆಸಗಿದ್ದರೆ ಸರ್ಕಾರ ಸಮರ್ಪಕ ತನಿಖೆ ನಡೆಸಿ ಕಾನೂನು ಕ್ರಮ ಕೈಗೊಳ್ಳಲಿ.
bigtvnews | Hubli Dharwad News | Kannada News | Karnataka News Hubli News | News In Hubli | Local news

