Breaking News

ಕುರಿ ಮತ್ತು ಉಣ್ಣೆ ಅಭಿವೃದ್ದಿ ನಿಗಮದಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಅರ್ಜಿ ಆಹ್ವಾನ

ಬೆಳಗಾವಿ: ಪ್ರಸ್ತಕ ಸಾಲಿನ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮ ನಿಯಮಿತ ವತಿಯಿಂದ ಸಂಚಾರಿ ಕುರಿಗಾರರಿಗೆ ಗುರುತಿನ ಚೀಟಿ ಪಡೆಯಲು ಜಿಲ್ಲೆಯಲ್ಲಿರುವ ಕನಿಷ್ಠ 20 ಕ್ಕಿಂತ ಹೆಚ್ಚು ಕುರಿ ಮೆಕ್ಕೆಗಳನ್ನು ಹೊಂದಿರುವ ಸಂಚಾರಿ ಕುರಿಗಾರರಿಂದ ಅರ್ಜಿ ಆಹ್ವಾನಿಸಲಾಗಿದೆ.
ಅರ್ಹ ಸಂಚಾರಿ ಕುರಿಗಾರರು ನಿಗದಿತ ನಮೂನೆಯನ್ನು ಪಡೆದು ವಲಸೆ ಹೋಗುವುದಕ್ಕೆ ಸಂಬಂದಪಟ್ಟ ಸ್ಥಳೀಯ ಗ್ರಾಮಲೆಕ್ಕಾಧಿಕಾರಿಗಳಿಂದ ಮಹಜರ ಪ್ರಮಾಣ ಪತ್ರ ಪಡೆದು, ಸೂಕ್ತ ದಾಖಲಾತಿಗಳೊಂದಿಗೆ ಭರ್ತಿ ಮಾಡಿದ ಅರ್ಜಿಯನ್ನು ತಮ್ಮ ವ್ಯಾಪ್ತಿಯಲ್ಲಿ ಬರುವ ಪ್ರಾಥಮಿಕ ಪಶು ಚಿಕಿತ್ಸಾಲಯ ಹಾಗೂ ಮುಖ್ಯ ಪಶು ವೈಧ್ಯಾಧಿಕಾರಿಗಳ ಕಚೇರಿಗೆ ಅರ್ಜಿ ಸಲ್ಲಿಸಬಹುದು ಎಂದು ಬೆಳಗಾವಿ ಕರ್ನಾಟಕ ಕುರಿ ಮತ್ತು ಉಣ್ಣೆ ಅಭಿವೃದ್ಧಿ ನಿಗಮದ ಉಪ ನಿರ್ದೇಶಕರು ತಿಳಿಸಿದ್ದಾರೆ.

Share News

About BigTv News

Check Also

6ನೇ ತರಗತಿ ಮೇಲೆ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ: ಆರೋಪಿ ಬಂಧನ

ಮುಂಡಗೋಡ: ಆರನೇ ತರಗತಿ ವಿದ್ಯಾರ್ಥಿನಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿ ಗರ್ಭಿಣಿಯನ್ನಾಗಿಸಿದ ಆರೋಪದ ಮೇಲೆ 65 ವರ್ಷದ ಇಸ್ಮಾಯಿಲ್ ಹುಲಗೂರ …

Leave a Reply

Your email address will not be published. Required fields are marked *