Breaking News

ರಾಜ್ಯದಲ್ಲಿ ಶೇ.10 ರಷ್ಟು ಸೇವೆಯನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ: ಪ್ರಿಯಾಂಕ್ ಖರ್ಗೆ ಅಸಮಾಧಾನ

ಬೆಂಗಳೂರು: ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳು ಸಮನ್ವಯತೆ, ಸಮಯಪ್ರಜ್ಞೆ, ಕಾರ್ಯಕ್ರಮಗಳ ಪರಿಣಾಮಕಾರಿ ಅನುಷ್ಠಾನ, ಸಾರ್ವಜನಿಕ ಸಮಸ್ಯೆಗಳಿಗೆ ಸ್ಪಂದನೆ ಹಾಗೂ ಹೊಣೆಗಾರಿಕೆ ಈ ಪಂಚಸೂತ್ರಗಳನ್ನು ಇರಿಸಿಕೊಂಡು ಕಾರ್ಯನಿರ್ವಹಿಸಬೇಕು ಎಂದು ಪಂಚಾಯತ್‌ ರಾಜ್‌ ಮತ್ತು ಐಟಿ ಸಚಿವ ಪ್ರಿಯಾಂಕ್‌ ಖರ್ಗೆ ಅಧಿಕಾರಿಗಳಿಗೆ ಸಲಹೆ ನೀಡಿದರು.
ನಗರದಲ್ಲಿ ಆಯೋಜಿಸಲಾಗಿದ್ದ ಪಂಚಾಯತ್‌ ರಾಜ್‌ ಇಲಾಖೆಯ ಅಧಿಕಾರಿಗಳ ಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, ರಾಜ್ಯದ ಗ್ರಾಮೀಣ ಭಾಗದಲ್ಲಿ ಮೂಲಭೂತ ಸೌಕರ್ಯ ಕಲ್ಪಿಸುತ್ತ, ರಾಜ್ಯದ ಜನರಿಗೆ ಸ್ವಾಭಿಮಾನ ಬದುಕು ನೀಡುವ ಕೆಲಸವನ್ನು ಪಂಚಾಯತ್‌ ರಾಜ್‌ ಇಲಾಖೆ ಮಾಡಬೇಕಿದೆ. ಸರಕಾರದ ಮೂಲ ಸೌಕರ್ಯ ಯೋಜನೆಗಳ ಅನುಷ್ಠಾನ ಮಾತ್ರವಲ್ಲದೆ, ಜನರ ಬದುಕಲ್ಲಿ ಬದಲಾವಣೆ ತರುವ ಶಕ್ತಿ ಈ ಇಲಾಖೆಗಿದೆ. ಆದರೆ ಇಲಾಖೆಯ ಅಧಿಕಾರಿಗಳು ಸೂಕ್ತ ರೀತಿಯಲ್ಲಿ ತಮ್ಮ ಸೇವೆ ಸಲ್ಲಿಸುತ್ತಿಲ್ಲ ನಮ್ಮಲ್ಲಿ ತಂತ್ರಜ್ಞಾನ, ಸವಲತ್ತು, ಸಂಪನ್ಮೂಲಗಳೆಲ್ಲ ಇದ್ದರೂ ಕೂಡ ನಾವು ಶೇ.10 ಸೇವೆಯನ್ನು ಜನರಿಗೆ ತಲುಪಿಸಲು ಸಾಧ್ಯವಾಗುತ್ತಿಲ್ಲ. ನಾವು ಶೇ. 90 ಬಾರಿ ವಿಫ‌ಲರಾಗುತ್ತಿದ್ದೇವೆ ಎಂದು ಬೇಸರ ವ್ಯಕ್ತಪಡಿಸಿದರು.
ಇಲಾಖೆಯ ಅಧಿಕಾರಿಗಳ ಮಧ್ಯೆ ಸಮನ್ವಯತೆ ಇಲ್ಲ ಆದರೆ ಕಾಂಟ್ರ್ಯಾಕ್ಟರ್‌ಗಳ ಜತೆಗೆ ಸಮನ್ವಯತೆ ಇದೆ ಕಾಂಟ್ರ್ಯಾಕ್ಟರ್‌ಗಳ ಮಧ್ಯೆ ಇರುವ ಸಮನ್ವಯತೆಯ ಶೇ. 50ರಷ್ಟು ನಮ್ಮ ಇಲಾಖೆಯ ಅಧಿಕಾರಿಗಳ ಮಧ್ಯೆ ಇದ್ದರೂ ಸಾಕಿತ್ತು. ಪ್ರತಿ ತಿಂಗಳು ಪರಾಮರ್ಶೆ ಸಭೆ ನಡೆಸಿದಾಗ ಮಕ್ಕಳಿಗೆ ಹೇಳಿದ ಹಾಗೆ ಹೇಳಿದರೂ ಸಹ ಏನೊಂದು ಪ್ರಗತಿ ಕಂಡು ಬಂದಿಲ್ಲ. ನಾನು ಸಭೆ ನಡೆಸಿದಾಗ ನನಗೆ ನಾನು ಗ್ರಾಮೀಣಾಭಿವೃದ್ಧಿ ಸಚಿವನಾಗಿ ಪರಿಣಾಮಕಾರಿಯಾಗಿ ಕೆಲಸ ಮಾಡಿದ್ದೇನಾ ಎಂಬ ಪ್ರಶ್ನೆ ಬರುತ್ತದೆ. ನಿಮ್ಮ ವಿಫ‌ಲತೆ ನನ್ನ ಮೇಲೆ ಪ್ರತಿಬಿಂಬಿತವಾಗುತ್ತಿದೆ ಎಂದು ತಮ್ಮ ಅಸಮಾಧಾನವನ್ನು ಹೊರಹಾಕಿದರು.

Share News

About BigTv News

Check Also

ಪ್ರೇಯಸಿ ಕರೆದಿದ್ದಕ್ಕೆ ಬಂದ ಯುವಕ ಸಿಕ್ಕಿಬಿದ್ದ: ಸ್ನೇಹಿತರ ಸಮೇತ ಕಂಬಕ್ಕೆ ಕಟ್ಟಿ ಥಳಿಸಿದ ಗ್ರಾಮಸ್ಥರು!

ಹಾವೇರಿ ಜಿಲ್ಲೆಯ ರಟ್ಟಿಹಳ್ಳಿ ತಾಲೂಕಿನ ಬತ್ತಿಕೊಪ್ಪ ಗ್ರಾಮದಲ್ಲಿ ಪ್ರೀತಿಸಿದ ಯುವತಿಯನ್ನು ಮದುವೆಯಾಗಲು ಬಂದ ಪ್ರಮೋದ್ ಹಾಗೂ ಆತನ ಸ್ನೇಹಿತರಾದ ಪ್ರಕಾಶ್, …

Leave a Reply

Your email address will not be published. Required fields are marked *