Breaking News

ಅಕ್ರಮ ಕೃಷಿ ಪಂಪ್‌ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿಗೆ ಸಿಎಂ ಸಿದ್ದರಾಮಯ್ಯ ಸೂಚನೆ

ಬೆಂಗಳೂರು: ಅಕ್ರಮ ಕೃಷಿ ಪಂಪ್ ಸೆಟ್ ಗಳ ಸಕ್ರಮ ಯೋಜನೆ ಮರು ಜಾರಿ ಸೇರಿ ರೈತರ ವಿವಿಧ ಸಮಸ್ಯೆಗಳನ್ನು ಆದ್ಯತೆ ಮೇರೆಗೆ ಬಗೆಹರಿಸುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅಧಿಕಾರಿಗಳಿಗೆ ಸೂಚನೆ ನೀಡಿದ್ದಾರೆ. ರೈತ ಮುಖಂಡ ಕುರುಬೂರು ಶಾಂತಕುಮಾರ್ ನೇತೃತ್ವದಲ್ಲಿ ತಮ್ಮನ್ನು ಭೇಟಿಯಾದ ರಾಜ್ಯ ರೈತ ಸಂಘಟನೆಗಳ ಒಕ್ಕೂಟ ಮತ್ತು ರಾಜ್ಯ ಕಬ್ಬು ಬೆಳೆಗಾರರ ಸಂಘದ ಪದಾಧಿಕಾರಿಗಳ ನಿಯೋಗದೊಂದಿಗೆ ಚರ್ಚೆ ನಡೆಸಿದ ಸಿಎಂ, ರೈತರ ಬೇಡಿಕೆಗಳನ್ನು ಪರಿಶೀಲಿಸಿ ಬಹು ಮುಖ್ಯವಾದ ಸಮಸ್ಯೆಗಳಿಗೆ ಶೀಘ್ರ ಪರಿಹಾರ ದೊರಕಿಸಿಕೊಡುವುದಾಗಿ ಭರವಸೆ ನೀಡಿದ್ದಾರೆ.
ಕೃಷಿ ಪಂಪ್ಸೆಟ್ ಗಳಿಗೆ ಆಧಾರ್ ಜೋಡಣೆ ಕಾರ್ಯವನ್ನು ತಕ್ಷಣ ಕೈಬಿಡಬೇಕು ಭೂ ಸುಧಾರಣಾ ತಿದ್ದುಪಡಿ ಕಾಯ್ದೆ ರದ್ದುಗೊಳಿಸಬೇಕು. ಕೃಷಿ ಸಾಲ ಮರುಪಾವತಿಸದ ರೈತರ ಜಮೀನು ವಶಪಡಿಸಿಕೊಳ್ಳುವ ಹಣಕಾಸು ಆಸ್ತಿಗಳ ಭದ್ರತೆ ಮತ್ತು ಪುನರ್ ನಿರ್ಮಾಣ ಕಾಯ್ದೆ ರದ್ದು ಮಾಡಬೇಕು ಎಂದು ರೈತ ಮುಖಂಡರು ಒತ್ತಾಯಿಸಿದ್ದಾರೆ.
ಬರ, ಅತಿವೃಷ್ಟಿ, ಪ್ರವಾಹದಿಂದ ಹಾನಿಯಾದ ಬೆಳೆಗಳಿಗೆ ವೈಜ್ಞಾನಿಕ ಮಾನದಂಡಗಳ ಅನ್ವಯ ಪರಿಹಾರ ಕೊಡಬೇಕು. ಖಾಸಗಿ ಫೈನಾನ್ಸ್, ಬ್ಯಾಂಕ್ ಸಾಲ ವಸೂಲಿ ನೆಪದಲ್ಲಿ ರೈತರಿಗೆ ಕಿರುಕುಳ ನೀಡುತ್ತಿದ್ದು, ಇದಕ್ಕೆ ಕಡಿವಾಣ ಹಾಕಬೇಕು ಜಿಂದಾಲ್ ಗೆ ನೀಡಿದ 3667 ಎಕರೆ ಜಮೀನು ಹಿಂಪಡೆಯಬೇಕು ಎಂಬುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ರೈತರು ಒತ್ತಾಯಿಸಿದ್ದಾರೆ.
ನಿಯೋಗದ ಮನವಿಯನ್ನು ಆಲಿಸಿದ ಸಿಎಂ, ಅಕ್ರಮ ಕೃಷಿಯ ಪಂಪ್ ಸೆಟ್ ಗಳ ಸಕ್ರಮದ ಯೋಜನೆಯನ್ನು ಮರು ಜಾರಿಯನ್ನು ಸೇರಿ ರೈತರು ಎದುರಿಸುತ್ತಿರುವ ವಿವಿಧ ಸಮಸ್ಯೆಗಳಿಗೆ ಆದ್ಯತೆಗಳ ಮೇರೆಗೆ ಪರಿಹಾರವನ್ನು ಒದಗಿಸುವಂತೆ ಅಧಿಕಾರಿಗಳಿಗೆ ಸೂಚನೆಯನ್ನು ನೀಡಿದ್ದಾರೆ.

Share News

About BigTv News

Check Also

ಸಿಲಿಂಡರ್ ಸ್ಫೋಟಗೊಂಡು 20ಕ್ಕೂ ಹೆಚ್ಚು ಕಾರ್ಮಿಕರ ಶೆಡ್‌ಗಳು ಭಸ್ಮ!

ಕಲಬುರಗಿ ಜಿಲ್ಲೆಯ ಹೊನ್ನಕಿರಣಗಿ ಗ್ರಾಮದ ವ್ಯಾಪ್ತಿಯಲ್ಲಿ ನಿರ್ಮಾಣ ಹಂತದಲ್ಲಿರುವ ಗುಲ್ಬರ್ಗಾ ಸಿಮೆಂಟ್ ಕಾರ್ಖಾನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟಗೊಂಡು ಭಾರೀ ಅಗ್ನಿ …

Leave a Reply

Your email address will not be published. Required fields are marked *